newsics.com
ವಿಜಯಪುರ: ಇಲ್ಲಿನ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಭಾನುವಾರ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಲಬುರ್ಗಿ ಮೂಲದ ಐಶ್ವರ್ಯ (23) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಐಶ್ವರ್ಯ ಎಂ.ಕಾಮ್ ಕೊನೆಯ ಸೆಮಿಸ್ಟರ್ ಪರೀಕ್ಷೆ ಬರೆಯಲು ವಿಜಯಪುರಕ್ಕೆ ಬಂದಿದ್ದಳು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ವಿಶ್ವವಿದ್ಯಾಲಯದ ಆವರಣದಲ್ಲಿನ ಸ್ನಾತಕೋತ್ತರ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಮಹಿಳಾ ವಿವಿಯಲ್ಲಿ ಎಂ.ಕಾಂ. ವಿದ್ಯಾರ್ಥಿನಿ ಆತ್ಮಹತ್ಯೆ
Follow Us