newsics.com
ನವದೆಹಲಿ: ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಗಡಿ ವಿವಾದವನ್ನು ಶಮನಗೊಳಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಡಿಸೆಂಬರ್ 14ರಂದು ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದಾರೆ ಎಂದು ಎನ್ಸಿಪಿ ನಾಯಕ ಅಮೋಲ್ ಕೋಲ್ಹೆ ಶುಕ್ರವಾರ ಹೇಳಿದ್ದಾರೆ.
ದಿಲ್ಲಿಯಲ್ಲಿ ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸಂಸದರ ನಿಯೋಗದೊಂದಿಗೆ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೋಲ್ಹೆ, ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ಗಡಿ ವಿವಾದವು ಪೂರ್ಣ ಹಿಂಸಾಚಾರದ ಹಂತಕ್ಕೆ ತಲುಪುವ ಹಾಗಿದೆ ಎಂದು ಎಂವಿಎ ನಿಯೋಗವು ಸಭೆಯಲ್ಲಿ ಶಾ ಅವರಿಗೆ ಮನವರಿಕೆ ಮಾಡಿದೆ.
ಡಿ.14ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಅಮಿತ್ ಶಾ ಸಭೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.