ಬೆಂಗಳೂರು: ರಾಮ ನಗರ ಸಮೀಪದ ಕುದೂರು ಬಳಿಯ ಗುಡೇಮಾರನ ಹಳ್ಳಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪ್ರವಾಸ ಮುಗಿಸಿ ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ ಎಂದು ವರದಿಯಾಗಿದೆ. ಕಾರು ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂರು ಮಂದಿ ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.