newsics.com
ಮಂಗಳೂರು: ಉಡುಪಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.
ಕಾರ್ಕಳದ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟಿರುವ ಮೈನೇರು ಎಂಬಲ್ಲಿ ಈ ದುರಂತ ಸಂಭವಿಸಿದೆ.
ಖಾಸಗಿ ಬಸ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಇದ್ದ ದಂಪತಿ ಮತ್ತು ಅವರ ಒಂದೂವರೆ ವರ್ಷದ ಮಗ ಸಾವನ್ನಪ್ಪಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಬೆಂಗಳೂರು ಮೂಲದ ದಂಪತಿ ಎಂದಷ್ಟೇ ತಿಳಿದುಬಂದಿದೆ.
ಬೆಳ್ತಂಗಡಿಯಿಂದ ಕಾರ್ಕಳಕ್ಕೆ ತೆರಳುತ್ತಿದ್ದ ವೇಳೆ ಎದುರಿನಿಂದ ಬಸ್ ಡಿಕ್ಕಿ ಹೊಡೆದಿದೆ. ಕಾರು ಬಸ್ ನ ಕೆಳಗೆ ನುಗ್ಗಿ ಅಪ್ಪಚ್ಚಿಯಾಗಿದೆ.
ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಇದೀಗ ಮುಂದುವರಿದಿದೆ