newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಸ್ವರೂಪದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗುತ್ತಿಗೆದಾರರು ಮತ್ತು ಉದ್ಯಮಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಲಾಗಿದೆ.
ಶೋಧ ಕಾರ್ಯ ಮುಂದುವರಿದಿದೆ. ದಾಳಿ ಸಂಬಂಧ ಯಾವುದೇ ಹೇಳಿಕೆಯನ್ನು ಆದಾಯ ತೆರಿಗೆ ಇಲಾಖೆ ನೀಡಿಲ್ಲ.
ಬೃಹತ್ ಮಟ್ಟದ ತೆರಿಗೆ ವಂಚನೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ