Wednesday, July 6, 2022

ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ‌ ಬಂಧನ

Follow Us

newsics.com
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಮಾಡಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿ ಸುಭಾಷ್ ಗುಪ್ತನನ್ನು ಪೊಲೀಸರು ಬಂಧಿಸಿದ್ದಾರೆ.
ಭಾವನ ಮೇಲೆ ಸೇಡು ತೀರಿಸಿಕೊಳ್ಳಲು ಬೆದರಿಕೆ ಕರೆ ಮಾಡಿದ್ದ ಸುಭಾಷ್, ವಿಚ್ಛೇದಿತ ಅಕ್ಕನ ಗಂಡನ ವಿರುದ್ಧ ಸೇಡು ತೀರಿಸಿಕೊಳ್ಳಲು ಸಂಚು ಮಾಡಿದ್ದ ಎಂದು ಪೊಲೀಸ್ ವಿಚಾರಣೆ ವೇಳೆ ತಿಳಿದುಬಂದಿದೆ.
ಶುಕ್ರವಾರ ಬೆಳಗಿನ ಜಾವ 3.30ಕ್ಕೆ ಭಾವನ ಹೆಸರು ಹೇಳಿ ಕಂಟ್ರೋಲ್ ರೂಮ್ಗೆ ಕರೆ ಮಾಡಿ ಬೆದರಿಕೆ ಹಾಕಿದ್ದ. ಅಕ್ಕನ ಗಂಡನ ಹೆಸರು ಹೇಳಿದರೆ ಅವನನ್ನು ಬಂಧಿಸುತ್ತಾರೆ ಎಂದು ಸುಭಾಷ್ ಭಾವಿಸಿದ್ದ. ಈ‌ ಮೊದಲು ಸುಭಾಷ್ ಗುಪ್ತ ಏರ್‌ಪೋರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ.
ಈಶಾನ್ಯ ವಿಭಾಗ ಪೊಲೀಸರು ಆರೋಪಿಯ ವಿಚಾರಣೆ ನಡೆಸುತ್ತಿದ್ದು, ಬಳಿಕ ಆರೋಪಿಯನ್ನು ವಿಧಾನಸೌಧ ಪೊಲೀಸರ ವಶಕ್ಕೆ ಹಸ್ತಾಂತರಿಸಲಿದ್ದಾರೆ.
ಬೆದರಿಕೆ ಕರೆಯಿಂದ ಶುಕ್ರವಾರ ಬೆಳಗಿನ‌ ಜಾವ ಏರ್ಪೋರ್ಟ್ನಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸ್, ಸಿಐಎಸ್‌ಎಪ್ ಭದ್ರತಾ ಪಡೆಯಿಂದ ಕೆಲ ಕಾಲ ಏರ್ ಲೈನ್ಸ್ ಗೇಟ್‌ಗಳು ಸೇರಿದಂತೆ ಏರ್ಪೋಟ್ ಟರ್ಮಿನಲ್ನಲ್ಲಿ ತೀವ್ರ ತಪಾಸಣೆ ಮಾಡಲಾಗಿದೆ. 2 ಗಂಟೆಗೂ ಅಧಿಕ ಕಾಲ ತಪಾಸಣೆ ನಡೆಸಿ ಹುಸಿ ಬಾಂಬ್ ಕರೆ ಎಂಬುದು ಖಚಿತವಾದ ಬಳಿಕ ಅಧಿಕಾರಿಗಳು, ಸಿಬ್ಬಂದಿ ನಿಟ್ಟುಸಿರುಬಿಟ್ಟಿದ್ದಾರೆ.

ಮತ್ತೆ ಚಿನ್ನ, ಬೆಳ್ಳಿ ದುಬಾರಿ

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಸಾಧ್ಯತೆ

ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಐಎಎಸ್ ಅಧಿಕಾರಿಯ ಬಂಧನ

newsics.com ಜಾರ್ಖಂಡ್‌: ಜಾರ್ಖಂಡ್‌ನಲ್ಲಿ ಐಐಟಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖುಂಟಿ ಉಪವಿಭಾಗಾಧಿಕಾರಿ ಸಯ್ಯದ್ ರಿಯಾಜ್ ಅಹಮದ್ ಅವರನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು...

ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ. ಸಾಗರ, ಹೊಸನಗರ ಮತ್ತು...

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು...
- Advertisement -
error: Content is protected !!