newsics.com
ಕೊಡಗು: ದಾಯಾದಿ ಕಲಹ ವಿಕೋಪಕ್ಕೆ ತೆರಳಿದ ಪರಿಣಾಮ ಓರ್ವ ಗುಂಡೇಟಿಗೆ ಬಲಿಯಾಗಿದ್ದರೆ, ಹತ್ಯೆ ಮಾಡಿದಾತ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹಂತಕ ಹಾರಿಸಿದ ಗುಂಡಿಗೆ ಮಹಿಳೆಯೊಬ್ಬರು ಚಿಂತಾಜನಕ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ದಕ್ಷಿಣ ಕೊಡಗಿನ ಕಿರಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಅಲೆಮಾಡ ಸೋಮಯ್ಯ ಸಾಗರ್ ಎಂಬಾತ ಚಿಕ್ಕಪ್ಪನ ಮಗನಾದ ಮಧು ಎಂಬಾತನೊಂದಿಗೆ ಅಡಿಕೆ ಫಸಲಿನ ವಿಚಾರಕ್ಕೆ ತಗಾದೆ ತೆಗೆದಿದ್ದಾನೆ. ಮಾತಿಗೆ ಮಾತು ಬೆಳೆದು ಕೋವಿಯಿಂದ ಮಧುವಿನ ಮೇಲೆ ಗುಂಡು ಹಾರಿಸಿದ್ದಾನೆ. ಇದರಿಂದ ಮಧು ಸ್ಥಳದಲ್ಲಿಯೇ ಉಸಿರು ಚೆಲ್ಲಿದ್ದಾರೆ.
ತಡೆಯಲು ಹೋದ ಮಧು ತಾಯಿ ಯಶೋಧಾರವರಿಗೆ ಗುಂಡೇಟು ತಗುಲಿ ಚಿಂತಾಜನಕರಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆ ಬಳಿಕ ಆರೋಪಿ ಸಾಗರ್ ಮನೆ ಪಕ್ಕದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.