newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆ. ಪಿ. ಅಗ್ರಹಾರದಲ್ಲಿ ಹತ್ಯೆಗೀಡಾದ ಯುವಕನ ಗುರುತು ಪತ್ತೆ ಹಚ್ಚಲಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಬಾಳಪ್ಪ ಜಮಖಂಡಿ ಎಂದು ಗುರುತಿಸಲಾಗಿದೆ. ಕಲ್ಲು ಎತ್ತಿ ಹಾಕಿ ಹತ್ಯೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಇದು ಅತ್ಯಂತ ಭಯಾನಕವಾಗಿದೆ. ಮೂವರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿ ಈ ಹತ್ಯೆ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. ಪ್ರಕರಣ ಸಂಬಂಧ ಓರ್ವ ಸೆಕ್ಯೂರಿಟಿ ಗಾರ್ಡ್ ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಭೀಕರ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಆರೋಪಿಗಳು ಬಾದಾಮಿ ಮೂಲದವರಾಗಿದ್ದಾರೆ ಎಂದು ಶಂಕಿಸಲಾಗಿದೆ.