ಮಂಡ್ಯ: ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದ್ದ ಮಂಡ್ಯದ ಅರ್ಕೇಶ್ವರ ದೇವಸ್ಥಾನದಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಶಿವು, ಮಂಜು, ಗಣೇಶ್ ಮತ್ತು ಶಿವರಾಜ್ ಎಂದು ಗುರುತಿಸಲಾಗಿದೆ
ಇದರೊಂದಿಗೆ ಮೂವರು ಅರ್ಚಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದವರ ಸಂಖ್ಯೆ 9ಕ್ಕೆ ಏರಿದೆ.
ಇದರ ಮೊದಲು ಆರೋಪಿಗಳನ್ನು ಗುಂಡು ಹಾರಿಸಿ ಬಂಧಿಸಲಾಗಿತ್ತು. ದೇವಸ್ಥಾನದಲ್ಲಿ ಪೂಜೆ ಮುಗಿಸಿ ಅಲ್ಲಿಯೇ ಮಲಗಿದ್ದ ಮೂವರು ಅರ್ಚಕರನ್ನು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಆರೋಪಿಗಳ ಬಳಿ ಇದ್ದ ಅಪಾರ ನಗದನ್ನು ಕೂಡ ವಶಪಡಿಸಿಕೊಳ್ಳಲಾಗಿದೆ