Saturday, April 17, 2021

ಮಂಡ್ಯ ಪ್ರೆಸ್ ಕ್ಲಬ್ ಸೀಲ್ ಡೌನ್

ಮಂಡ್ಯ: ಶ್ರೀರಂಗಪಟ್ಟಣದ ಪತ್ರಕರ್ತರೊಬ್ಬರಿಗೆ ಕೊರೋನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪತ್ರಕರ್ತರ ಸಂಘ (ಪ್ರೆಸ್‌ ಕ್ಲಬ್‌) ಕಟ್ಟಡದ ಸುತ್ತ ಸೀಲ್‌ಡೌನ್‌ ಮಾಡಲಾಗಿದೆ.
ಈ ಪತ್ರಕರ್ತ ಇತ್ತೀಚೆಗೆ ಜನ್ಮದಿನ ಆಚರಿಸಿಕೊಂಡಿದ್ದು, ಈ ಔತಣಕೂಟದಲ್ಲಿ ಹಲವು ಪತ್ರಕರ್ತರು ಪಾಲ್ಗೊಂಡಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮಂಡ್ಯ ಜಿಲ್ಲಾ ಪತ್ರಕರ್ತರ ಸಂಘದ ಕಟ್ಟಡವನ್ನು ಸ್ವಯಂ ಪ್ರೇರಿತವಾಗಿ ಸೀಲ್‌ಡೌನ್‌ ಮಾಡಲಾಗಿದೆ. ’10 ದಿನಗಳವರೆಗೆ ಪತ್ರಿಕಾ ಭವನದಲ್ಲಿ ಕಾರ್ಯಕ್ರಮ ಹಾಗೂ ಪತ್ರಿಕಾಗೋಷ್ಠಿ ರದ್ದು ಮಾಡಲಾಗಿದೆ’ ಎಂದು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಸಿ.ಮಂಜುನಾಥ್‌ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!