Wednesday, October 28, 2020

ಮನೀಶ್ ಶೆಟ್ಟಿ ಕೊಲೆ ಆರೋಪಿಗಳಿಗೆ ಗುಂಡಿಕ್ಕಿ ಬಂಧನ

newsics.com
ಬೆಂಗಳೂರು: ಬ್ರಿಗೇಡ್ ರಸ್ತೆಯ ಡುಯೆಟ್ ಬಾರ್ ಮಾಲೀಕ ಮನೀಶ್ ಶೆಟ್ಟಿ ಅವರಿಗೆ ಗುಂಡಿಕ್ಕಿ ಕೊಲೆಗೈದು ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಕೇಂದ್ರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಮುನ್ನಾ (45), ಗಣೇಶ್ (39), ನಿತ್ಯ (29) ಮತ್ತು ಅಕ್ಷಯ್ (32) ಬಂಧಿತರು. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಗುಂಡು ಹಾರಿಸಿ ಬಂಧಿಸಲಾಗಿದೆ‌ ಎಂದು ಡಿಸಿಪಿ ಅನುಚೇತ್ ತಿಳಿಸಿದ್ದಾರೆ.
ಮನೀಶ್ ಶೆಟ್ಟಿಯನ್ನು ಹತ್ಯೆಗೈಯಲು ಉಪಯೋಗಿಸಿದ್ದ ಮಾರಕಾಸ್ತ್ರಗಳನ್ನ ಜಫ್ತಿ ಮಾಡಲು ಹೊಸೂರು ರಸ್ತೆಯ ಬಾರ್ಲೆನ್ ಸ್ಮಶಾನ ಬಳಿ ಪೊಲೀಸರು ತಪಾಸಣೆ ಮಾಡುವಾಗ ಆರೋಪಿಗಳು ಹಲ್ಲೆಗೆ ಯತ್ನಿಸಿದ್ದಾರೆ. ಆಗ ಪೊಲೀಸರು ಗುಂಡು ಹೊಡೆದಿದ್ದಾರೆ. ಆರೋಪಿ ಶಶಿಕಿರಣ್ ಹಾಗೂ ಆರೋಪಿ ಅಕ್ಷಯ್ ಕಾಲಿಗೆ ಗುಂಡು ತಗುಲಿದೆ. ಗಾಯಗೊಂಡ ಅವರಿಬ್ಬರನ್ನು ಸೇಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಧಿತರಲ್ಲಿ ಶಶಿಕಿರಣ್ ಮತ್ತು ನಿತ್ಯ ಕೊಡಗಿನವರಾದರೆ, ಗಣೇಶ್ ಮತ್ತು ಅಕ್ಷಯ್ ಮಂಗಳೂರಿನವರು. ಡ್ಯೂಯಟ್ ಬಾರ್ ಮಾಲೀಕ ಮನೀಶ್ ಶೆಟ್ಟಿಯನ್ನು ಅ.15ರಂದು ರಾತ್ರಿ ‌ಬೈಕ್ ನಲ್ಲಿ ಬಂದಿದ್ದ ದುಷ್ಕರ್ಮಿಗಳು ಬಾರ್ ಮುಂದೆಯೇ ಗುಂಡು ಹಾರಿಸಿ ಕೊಲೆ ಮಾಡಿ ಪರಾರಿಯಾಗಿದ್ದರು.

ಐಎಂಎ ಬಹುಕೋಟಿ ರೂ. ವಂಚನೆ ಕೇಸ್; ಸಿಬಿಐನಿಂದ 28 ಮಂದಿ ವಿರುದ್ಧ ಪೂರಕ ಚಾರ್ಜ್​​ಶೀಟ್​

ಮೋಹೆಯಲ್ಲಿ ಮೂರು ಸೂರ್ಯ; ಜನರಿಗೆ ಆಶ್ಚರ್ಯ

3 ದಿನದಲ್ಲಿ 40 ಪಾಕ್ ಯೋಧರ ಹತ್ಯೆ

ಮತ್ತಷ್ಟು ಸುದ್ದಿಗಳು

Latest News

ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: 65 ಸಾಧಕರಿಗೆ ಪ್ರಶಸ್ತಿ ಗೌರವ

Newsics.com ಬೆಂಗಳೂರು: ರಾಜ್ಯದ ಪ್ರತಿಷ್ಠಿತ  2020ರ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಸಂಘ ಸಂಸ್ಥೆಗಳು, ಸಾಧಕರು ಸೇರಿದಂತೆ 65 ಮಂದಿಗೆ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ.  ಬೆಂಗಳೂರಿನಲ್ಲಿ  ಕನ್ನಡ ಮತ್ತು...

ಎನ್‌ಐಎನಿಂದ ಬೆಂಗಳೂರಲ್ಲಿ ಇನ್ನಿಬ್ಬರು ಶಂಕಿತ ಉಗ್ರರ ಬಂಧನ

newsics.comಬೆಂಗಳೂರು: ನಗರದಲ್ಲಿ ಶಂಕಿತ ಐಸಿಸ್ ಉಗ್ರರ ಭೇಟೆ ಮುಂದುವರಿಸಿರುವ ಎನ್‌ಐಎ ಅಧಿಕಾರಿಗಳ ತಂಡ, ಇದೀಗ ಇನ್ನಿಬ್ಬರು ಶಂಕಿತರನ್ನು ಬಂಧಿಸಿದೆ.ಬೆಂಗಳೂರಿನ ಥಣಿಸಂದ್ರದಲ್ಲಿರುವ ನಿವಾಸವೊಂದರ ಮೇಲೆ ದಾಳಿ ನಡೆಸಿರುವ ದೆಹಲಿ ಎನ್‌ಐಎ ಟೀಮ್,...

9 ಗಂಟೆ ವಿಚಾರಣೆ ವೇಳೆ ಮೋದಿಗೆ ಕೇಳಲಾಗಿತ್ತು 100 ಪ್ರಶ್ನೆ

Newsics.com ನವದೆಹಲಿ:  ಗುಜರಾತ್ ಹಿಂಸಾಚಾರ ಕುರಿತಂತೆ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ರಾಘವನ್ , ಮೋದಿ ವಿಚಾರಣೆ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಐಪಿಎಸ್ ಅಧಿಕಾರಿಯಾಗಿದ್ದ ರಾಘವನ್ ನೇತೃತ್ವದಲ್ಲಿ ವಿಶೇಷ...
- Advertisement -
- Advertisement -
error: Content is protected !!