newsics.com
ಬೆಂಗಳೂರು: ಮಂಗಳೂರು ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ಬಹುತೇಕ ಗುಣಣುಖನಾಗಿದ್ದು, ಸದ್ಯದಲ್ಲಿಯೇ ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾನೆ. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಹಲವು ಮಾಹಿತಿಗಳನ್ನು ಕಲೆ ಹಾಕಿರುವ ರಾಷ್ಟ್ರೀಯ ತನಿಖಾ ದಳ ಇದೀಗ ಆರೋಪಿ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ವಶಕ್ಕೆ ತೆಗೆದುಕೊಳ್ಳಲು ಸಿದ್ದತೆ ನಡೆಸಿದೆ.
ನವೆಂಬರ್ 19ರಂದು ಮಂಗಳೂರು ಹೊರವಲಯದ ಪಂಪ್ ವೆಲ್ ಬಳಿ ಕುಕ್ಕರ್ ಸ್ಫೋಟಗೊಂಡಿತ್ತು. ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದರು.
ರಿಕ್ಷಾದಲ್ಲಿದ್ದ ಆರೋಪಿ ಶಾರೀಕ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ. ಇದೀಗ 45 ದಿನಗಳ ಚಿಕಿತ್ಸೆ ಬಳಿಕ ಶಾರೀಕ್ ಗುಣಮುಖನಾಗಿದ್ದಾನೆ.