newsics.com
ಮಂಗಳೂರು: ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಮಂಗಳೂರು ಸ್ಫೋಟ ಪ್ರಕರಣದ ತನಿಖೆಯನ್ನು ಇದೀಗ ಅಧಿಕೃತವಾಗಿ ರಾಷ್ಟ್ರೀಯ ತನಿಖಾ ದಳ ಎನ್ ಐ ಎ ಗೆ ಹಸ್ತಾಂತರಿಸಲಾಗಿದೆ.
ಮಂಗಳೂರು ಪೊಲೀಸ್ ಕಮಿಷನರ್ ಶಶಿ ಕುಮಾರ್ ಈ ಸಂಬಂಧ ದಾಖಲೆಗಳನ್ನು ಎನ್ ಐ ಎ ಅಧಿಕಾರಿಗಳಿಗೆ ನೀಡಿದ್ದಾರೆ.
ರಾಷ್ಟ್ರೀಯ ತನಿಖಾ ದಳ ಇಂದಿನಿಂದ ಅಧಿಕೃತವಾಗಿ ತನಿಖೆ ಆರಂಭಿಸಲಿದೆ. ಮಂಗಳೂರು ಬಾಂಬ್ ಸ್ಫೋಟಕ್ಕೂ ನೆರೆಯ ಕೇರಳದ ಕಾಸರಗೋಡಿಗೂ ಲಿಂಕ್ ಇರುವ ಶಂಕೆ ಕೂಡ ವ್ಯಕ್ತವಾಗಿದೆ.
ಆರೋಪಿ ಶಾರೀಕ್ ನ ಪ್ರಾಥಮಿಕ ಹೇಳಿಕೆ ಪಡೆಯಲಾಗಿದ್ದು ಎನ್ ಐ ಎ ಅಧಿಕಾರಿಗಳು ಮತ್ತೊಮ್ಮೆ ಆರೋಪಿಯನ್ನು ವಿಚಾರಣೆಗೆ ಗುರಿಪಡಿಸಲಿದ್ದಾರೆ.