ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್ ಪ್ರಕರಣದ ಶಂಕಿತ ಆರೋಪಿ ಪೊಲೀಸರ ಮುಂದೆ ಶರಣಾಗಿದ್ದಾನೆ. ಆರೋಪಿಯನ್ನು ಉಡುಪಿ ಮೂಲದ ಆದಿತ್ಯ ರಾವ್ ಎಂದು ಗುರುತಿಸಲಾಗಿದೆ. ಮುಂಜಾನೆ ಬೆಂಗಳೂರಿನ ಹಲಸೂರು ಪೊಲೀಸ್ ಠಾಣೆಯಲ್ಲಿ ಆದಿತ್ಯ ರಾವ್ ಶರಣಾಗಿದ್ದಾನೆ. ಈ ಹಿಂದೆ 2018ರಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ ಕೃತ್ಯಕ್ಕೆ ಸಂಬಂಧಿಸಿದಂತೆ ಆದಿತ್ಯ ರಾವ್ ನನ್ನು ಬಂಧಿಸಲಾಗಿತ್ತು. ಇದೀಗ ಆದಿತ್ಯ ರಾವ್ ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ವಿಚಾರಣೆ ತೀವ್ರಗೊಳಿಸಿದ್ದಾರೆ.