newsics.com
ಮಂಗಳೂರು: ಆಂಕರ್ ಅನುಶ್ರೀ ಅವರಿಗೆ ಸಮನ್ಸ್ ನೀಡಿ ವಿಚಾರಣೆ ನಡೆಸಿದ್ದ ಮಂಗಳೂರು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಇನ್ಸ್’ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ಅವರ ವರ್ಗಾವಣೆಯನ್ನು ಸರ್ಕಾರ ತಡೆಹಿಡಿದಿದೆ.
ಮಾಧ್ಯಮಗಳ ವರದಿಯಿಂದ ಎಚ್ಚೆತ್ತ ಸರ್ಕಾರ ವರ್ಗಾವಣೆಯನ್ನು ತಡೆಹಿಡಿದಿದೆ ಎನ್ನಲಾಗಿದ್ದು, ತೀವ್ರ ಒತ್ತಡದ ಹಿನ್ನೆಲೆಯಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಜಾಗಕ್ಕೆ ಮಹೇಶ್ ಪ್ರಸಾದ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಶಿವಪ್ರಕಾಶ್ ಅವರನ್ನು ಲೋಕಯುಕ್ತಕ್ಕೆ ವರ್ಗಾವಣೆ ಮಾಡಿತ್ತು.
ಆದರೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಸರ್ಕಾರ ಮತ್ತು ಪೊಲೀಸ್ ಇಲಾಖೆ ತನ್ನ ನಿರ್ಧಾರದಿಂದ ಹಿಂದೆ ಸರಿದಿದ್ದು, ಸಿಸಿಬಿ ಪಿಐ ಶಿವಪ್ರಕಾಶ್ ವರ್ಗಾವಣೆಗೆ ತಡೆಹಿಡಿದಿದೆ. ಶಿವಪ್ರಕಾಶ್ ಸಿಸಿಬಿಯಲ್ಲಿಯೇ ಮುಂದುವರೆಯಲಿದ್ದಾರೆ ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ತಿಳಿಸಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ಯಾನ್ಸರ್ ಕಮ್ ನಟ ಕಿಶೋರ್ ಶೆಟ್ಟಿ ಬಂಧನ, ಕಿಶೋರ್ ಆಪ್ತರ ಹೇಳಿಕೆ ಆಧಾರದ ಮೇಲೆ ನಿರೂಪಕಿ ಅನುಶ್ರೀಗೆ ವಿಚಾರಣೆಗೆ ಸಮನ್ಸ್ ನೀಡಲಾಗಿತ್ತು. ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರು ಹಾಗೂ ಬೆಂಗಳೂರು ನಡುವಿನ ಸಂಪರ್ಕವಾಗಿದ್ದ ನೈಜೀರಿಯನ್ ಫ್ರಾಂಕ್ ಎಂಬಾತನನ್ನು ವಿಚಾರಣೆಗೊಳಪಡಿಸಲಾಗಿದ್ದು, ಅಗತ್ಯ ಬಿದ್ದರೆ ನಟಿ ಅನುಶ್ರೀ ಅವರನ್ನು ಮತ್ತೊಮ್ಮೆ ವಿಚಾರಣೆಗೊಳಪಡಿಸಲಾಗುವುದು ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಅನುಶ್ರೀ ವಿಚಾರಣೆ ನಡೆಸಿದ್ದ ಸಿಸಿಬಿ ಇನ್ಸ್’ಪೆಕ್ಟರ್ ಶಿವಪ್ರಕಾಶ್ ವರ್ಗಾವಣೆ ರದ್ದು
Follow Us