Tuesday, April 13, 2021

ಮಂಗಳೂರಿನಲ್ಲಿ ನಡುಕ ಹುಟ್ಟಿಸಿರುವ ದುಬೈ ವಿಮಾನ

ಮಂಗಳೂರು: ಕೊರೋನಾದಿಂದ ತತ್ತರಿಸಿರುವ ಮಂಗಳೂರಿನಲ್ಲಿ ಇದೀಗ ದುಬೈ ವಿಮಾನದ ಬಗ್ಗೆ  ಜನರು ಹೆಚ್ಚು ಚಿಂತಿತರಾಗಿದ್ದಾರೆ. ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16 ಕೊರೋನಾ ಪ್ರಕರಣ ವರದಿಯಾಗಿದ್ದು, ಇದರಲ್ಲಿ 15 ದುಬೈನಿಂದ ವಿಮಾನದಲ್ಲಿ ಬಂದವರಾಗಿದ್ದಾರೆ.. ದುಬೈನಲ್ಲಿ ವಿಮಾನ ಹತ್ತುವ ಮೊದಲು ಎಲ್ಲರನ್ನು ವೈದ್ಯಕೀಯ ಪರೀಕ್ಷೆಗೆ ಗುರಿಪಡಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ಇಲ್ಲಿ ವಿಮಾನ ಇಳಿದ ಕೂಡಲೇ ಪ್ರಯಾಣಿಕರಲ್ಲಿ ಕೊರೋನಾ ಸೋಂಕು ಕಂಡು ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.  ಮೇ 18ರಂದು ಸಂಜೆ ಮತ್ತೊಂದು ವಿಮಾನ ದುಬೈ ನಿಂದ ಮಂಗಳೂರಿಗೆ ಆಗಮಿಸಲಿದೆ. ಈ ವಿಮಾನದಲ್ಲಿ ಬರುವ  ಎಲ್ಲ ಪ್ರಯಾಣಿಕರು ಕೊರೋನಾದಿಂದ ಮುಕ್ತರಾಗಿರಲಿ ಎಂದು  ಜನರು ಹಾರೈಸುತ್ತಿದ್ದಾರೆ. ಕೊರೋನಾ ಪ್ರಕರಣ ವರದಿಯಾದರೆ ಅದನ್ನು ತಡೆಗಟ್ಟುವುದು ಕೂಡ ಜಿಲ್ಲಾ಼ಡಳಿತಕ್ಕೆ ಸವಾಲಿನ ವಿಷಯವಾಗಿದೆ. ಕೇರಳದ ಜತೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ, ಇಡೀ ಜಿಲ್ಲೆಯನ್ನು ಕೊರೋನಾ ಮುಕ್ತವಾಗಿಸಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!