Wednesday, July 6, 2022

ಶಿರಾ ಶಾಸಕ ಸತ್ಯನಾರಾಯಣ ನಿಧನ ದೃಢಪಡಿಸಿದ ಮಣಿಪಾಲ್ ಆಸ್ಪತ್ರೆ

Follow Us

ಬೆಂಗಳೂರು: ತುಮಕೂರು ಜಿಲ್ಲೆ ಶಿರಾ ಶಾಸಕ ಬಿ ಸತ್ಯನಾರಾಯಣ (69) ಅವರ ಸಾವಿನ ವಿಚಾರದಲ್ಲಿ ಉಂಟಾಗಿದ್ದ ಗೊಂದಲಕ್ಕೆ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ತೆರೆ ಎಳೆದಿದೆ.
ಶಾಸಕ ಬಿ ಸತ್ಯನಾರಾಯಣ ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಹೆಲ್ತ್ ಬುಲೆಟಿನ್ ಸ್ಪಷ್ಟಪಡಿಸಿದೆ. ಸತ್ಯನಾರಾಯಣ ಅವರು ಮಂಗಳವಾರ ರಾತ್ರಿ 10.45ಕ್ಕೆ ನಿಧನ ಹೊಂದಿರುವುದಾಗಿ ಮಣಿಪಾಲ್ ಆಸ್ಪತ್ರೆಯ ಆಡಳಿತ ಮಂಡಳಿ ಪ್ರಕಟಿಸಿದೆ.
ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ವಿಧಾನಭಾ ಚುನಾವಣೆಯಲ್ಲಿ ಅವರು ಜೆಡಿಎಸ್ ಪಕ್ಷದಿಂದ ಸ್ಪರ್ಥಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು.
ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಮಂಗಳವಾರ ಬೆಳಗಿನಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಸತ್ಯನಾರಾಯಣ ನಿಧನದ ಸುದ್ದಿ ಹರಿದಾಡಲಾರಂಭಿಸಿತ್ತು.
ಆದರೆ ಕೆಲ ಹೊತ್ತಿನಲ್ಲೇ ಸತ್ಯನಾರಾಯಣ ಕುಟುಂಬಸ್ಥರು ಶಾಸಕ ಸತ್ಯನಾರಾಯಣ ನಿಧನರಾಗಿಲ್ಲ. ಅವರ ಆರೋಗ್ಯ ಸ್ಥಿರವಾಗಿದ್ದು ಅವರನ್ನು ವೆಂಟಿಲೇಟರ್ ನಲ್ಲಿ ಇಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದರು. ಬಿ ಸತ್ಯನಾರಾಯಣ ಅವರು ಶಿರಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 1994, 2004, 2008 ಮತ್ತು 2018 ಅವಧಿಯಲ್ಲಿ ಬಿ ಸತ್ಯನಾರಾಯಣ ಅವರು ತಮ್ಮ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಶಿರಾ ಕ್ಷೇತ್ರವನ್ನು ಪ್ರತಿನಿಧಿಸಿ ಜೆಡಿಎಸ್’ನಿಂದ ಗೆಲುವು ಸಾಧಿಸಿದ್ದ ಸತ್ಯನಾರಾಯಣ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಸೇರಿ ಹಲವು ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದಾರೆ.
ಪತ್ನಿ ಅಮ್ಮಾಜಮ್ಮ, ಪುತ್ರ ಎಸ್.ಪ್ರಕಾಶ್ ಹಾಗೂ 4 ಹೆಣ್ಣುಮಕ್ಕಳನ್ನು ಶಾಸಕರು ಅಗಲಿದ್ದಾರೆ. ಬುಧವಾರ ಶಿರಾ ತಾಲೂಕು ಬೂವನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಬೆಳಗ್ಗೆ ತುಮಕೂರಿನ ಜಿಲ್ಲಾ ಜೆಡಿಎಸ್ ಕಚೇರಿ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ‌ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾ ಕಾರ್ಯಾಧ್ಯಕ್ಷ ಟಿ.ಆರ್.ನಾಗರಾಜು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ರಷ್ಯಾ ಕ್ಷಿಪಣಿ ದಾಳಿಗೆ ಬ್ರೆಜಿಲ್ ಮಾಡೆಲ್ ಸಾವು

newsics.com ಮಾಸ್ಕೋ: ಉಕ್ರೇನ್  ವಿರುದ್ಧ ರಷ್ಯಾ ನಡೆಸುತ್ತಿರುವ ಹೋರಾಟದಲ್ಲಿ ಬ್ರೆಜಿಲ್ ನ ರೂಪದರ್ಶಿಯೊಬ್ಬರು ಮೃತಪಟ್ಟಿದ್ದಾರೆ. ಸಾವನ್ನಪ್ಪಿರುವ ರೂಪದರ್ಶಿಯನ್ನು  ಬ್ರೆಜಿಲ್ ನ  ಥಾಲಿತಾ ಡೂ ವಲ್ಲೆ ಎಂದು ಗುರುತಿಸಲಾಗಿದೆ. ಥಾಲಿತಾ  ಉಕ್ರೇನ್...

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ,  ಮೊಹಮ್ಮದ್ ನದೀಂ , ಸಚ್ಚಿಂದ್ರನ್ ಮತ್ತು...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...
- Advertisement -
error: Content is protected !!