Saturday, April 17, 2021

ಒಂದೇ ಹೊಂಡಕ್ಕೆ ಹಲವು ಹೆಣ- ತನಿಖೆಗೆ ಆದೇಶ!

ಬಳ್ಳಾರಿ: ಬಳ್ಳಾರಿಯಲ್ಲಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ ವ್ಯಕ್ತಿಯ ಅಮಾನವೀಯ ಅಂತ್ಯಸಂಸ್ಕಾರದ ವಿಡಿಯೋ ಬಹಿರಂಗವಾಗುತ್ತಿದ್ದಂತೆ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಬಳ್ಳಾರಿ ಡಿಸಿ ಎಸ್.ಎಸ್.ನಕುಲ್ ಅಪರ ಜಿಲ್ಲಾಧಿಕಾರಿ ಪಿ‌.ಎಸ್‌.ಮಂಜುನಾಥ್ ಗೆ ಆದೇಶಿಸಿದ್ದಾರೆ.
ಸೋಮವಾರ ಒಂದೇ ದಿನ ಬಳ್ಳಾರಿಯಲ್ಲಿ ಕೊರೋನಾ ಸೋಂಕಿನಿಂದ ಎಂಟು ಜನರು ಸಾವನ್ನಪ್ಪಿದ್ದರು. ಒಂದೇ ದಿನ ಹೆಚ್ಚು ಜನರು ಸಾವನ್ನಪ್ಪಿದ್ದರಿಂದ ಒಂದೇ ಜಾಗದಲ್ಲಿ ಅಂತ್ಯಸಂಸ್ಕಾರ ನಡೆಸಲು ಆರೋಗ್ಯ ಇಲಾಖೆ ಸೂಚಿಸಿತ್ತು.‌ ಬಳ್ಳಾರಿ ನಗರದ ಹೊರವಲಯದಲ್ಲಿ ಅಂತ್ಯಸಂಸ್ಕಾರಕ್ಕಾಗಿ ಜಾಗ ನಿಗದಿಪಡಿಸಲಾಗಿತ್ತು. ಆದರೆ, ಅಂತ್ಯಸಂಸ್ಕಾರಕ್ಕೆ ಆಗಮಿಸಿದ ಸಿಬ್ಬಂದಿ ಒಂದೇ ಹೊಂಡದಲ್ಲಿ ಎಲ್ಲ ಹೆಣವನ್ನು ಎಸೆದು ಬರಲಾಗಿತ್ತು.
ಹೀಗೆ ಅಮಾನವೀಯವಾಗಿ ಹೆಣವನ್ನು ಎಸೆದು ಬಂದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಈ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ. ಬಳ್ಳಾರಿಯಲ್ಲಿ ಮಂಗಳವಾರವೂ ಐವರು ಸಾವನ್ನಪ್ಪಿದ್ದು ಮೃತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ.

 

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!