Saturday, April 17, 2021

ಮಾರಿಕಾಂಬಾ ದೇಗುಲ ಸೀಲ್’ಡೌನ್!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಾಲಯಕ್ಕೂ ಕೊರೋನಾ ಭೀತಿ ಎದುರಾಗಿದ್ದು ದೇವಾಲಯವನ್ನು ಸೀಲ್ ಡೌನ್ ಮಾಡಲಾಗಿದೆ.
ದೇವಾಲಯಕ್ಕೆ ಪ್ರತಿನಿತ್ಯ ಬರುತ್ತಿದ್ದ ಭಕ್ತನ ಪಕ್ಕದ ಮನೆಯವರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದೇವಾಲಯವನ್ನು ಸೀಲ್ ಡೌನ್ ಮಾಡಲಾಗಿದೆ.
ದೇವಾಲಯವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಿದ ಬಳಿಕ ಇನ್ನೆರಡು ದಿನಗಳ ನಂತರ ಒಫನ್ ಮಾಡಲು ದೇವಾಲಯ ಆಡಳಿತ ಮಂಡಳಿ ನಿರ್ಧರಿಸಿದೆ. ಇನ್ನು ಕೊರೋನಾ ಸೋಂಕು ಕಾಣಿಸಿಕೊಂಡಿರುವ ವ್ಯಕ್ತಿಯ ನಿವಾಸದ ಪಕ್ಕದ ಎರಡು ಬೀದಿಯ ಜನರು ಕಂಗಾಲಾಗಿದ್ದು ಆತಂಕದಲ್ಲಿ ದಿನದೂಡುತ್ತಿದ್ದಾರೆ.
ಜ್ವರ ತಪಾಸಣೆ ಕಡ್ಡಾಯ:
ಈ ಮಧ್ಯೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕು ತೀವ್ರ ರೀತಿಯಲ್ಲಿ ಹರಡುತ್ತಿದ್ದು, ಹೊರ ಜಿಲ್ಲೆಗಳಿಂದ ಬರುವವರಿಗೆ ಜ್ವರ ಪರೀಕ್ಷೆಯನ್ನು ಕಡ್ಡಾಯಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800 ರೂ.ನಿಂದ 899 ರೂಪಾಯಿಗೆ...
- Advertisement -
error: Content is protected !!