Monday, October 3, 2022

2ನೇ ಮಹಾಯುದ್ಧದಲ್ಲಿ ಭಾಗಿಯಾಗಿದ್ದ ಮಾರ್ಕ್ ರೊಡ್ರಿಗಸ್ ಇನ್ನಿಲ್ಲ

Follow Us

newsics.com
ಮಂಗಳೂರು: ಬ್ರಿಟಿಷ್ ಭಾರತೀಯ ಸೇನೆಗೆ ಸೇರಿ, ಎರಡನೇ ಮಹಾಯುದ್ಧದಲ್ಲಿ ಪಾಲ್ಗೊಂಡಿದ್ದ ಮಾರ್ಕ್ ರೊಡ್ರಿಗಸ್ (98) ಮಂಗಳೂರಿನ ಕದ್ರಿಯ ಅಲ್ವಾರಿಸ್ ರಸ್ತೆಯ ಸ್ವಗೃಹದಲ್ಲಿ ಶನಿವಾರ ನಿಧನರಾದರು.
ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಮಾರ್ಕ್ ಅವರ ಅಂತ್ಯಕ್ರಿಯೆ ನ.8ರಂದು ಮಧ್ಯಾಹ್ನ ನಗರದ ಬೆಂದೂರಿನ ಸೈಂಟ್ ಸೆಬಾಸ್ಟಿಯನ್ ಚರ್ಚ್‌ನಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರಿಗೆ ಐವರು ಪುತ್ರಿಯರಿದ್ದಾರೆ.
1922ರ ಏಪ್ರಿಲ್ 25ರಂದು ಕುಂದಾಪುರದಲ್ಲಿ ಜನಿಸಿದ್ದ ಮಾರ್ಕ್ ರೊಡ್ರಿಗಸ್, 1940ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿ ಬ್ರಿಟಿಷ್ ಭಾರತೀಯ ಸೇನೆಗೆ ಸೇರ್ಪಡೆಯಾದರು. ಎರಡನೇ ಮಹಾಯುದ್ಧ (1939-1945) ಪ್ರಗತಿಯಲ್ಲಿದ್ದ ಸಂದರ್ಭ ಇವರನ್ನು ಮಿತ್ರರಾಷ್ಟ್ರಗಳ ವಿರುದ್ಧ ಹೋರಾಡಲು ಮಧ್ಯಪ್ರಾಚ್ಯ ಯುದ್ಧ ವಲಯಕ್ಕೆ ಕಳುಹಿಸಲಾಗಿತ್ತು. ನಂತರ 1942ರಲ್ಲಿ ಮಾರ್ಕ್ ಅವರನ್ನು ಜರ್ಮನ್ ಪಡೆಗಳು ವಶಪಡಿಸಿಕೊಂಡಿದ್ದವು. ಏಳು ವರ್ಷಗಳ ಸಕ್ರಿಯ ಮಿಲಿಟರಿ ಸೇವೆಯ ನಂತರ ಮಾರ್ಕ್ ಅವರು ಭಾರತಕ್ಕೆ ಮರಳಿದ್ದರು. ನಂತರ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪೂರ್ಣಗೊಳಿಸಿ, ರಕ್ಷಣಾ ಸ್ಥಾಪನೆಗೆ ಸೇರಿದ್ದರು. ಇವರು ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ಸುಮಾರು 30 ವರ್ಷಗಳ ಕಾಲ ಸೇವೆ ಸಲ್ಲಿಸಿದ ನಂತರ 1981ರಲ್ಲಿ ಡಿಆರ್‌ಡಿಒ ವಿಜ್ಞಾನಿಗಳಾಗಿ ನಿವೃತ್ತರಾಗಿದ್ದರು.

ಅಮೆರಿಕ ಅಧ್ಯಕ್ಷರಾಗಿ ಜೊ ಬಿಡೆನ್ ಆಯ್ಕೆ, ಕಮಲಾ ಹ್ಯಾರಿಸ್ ವೈಸ್ ಪ್ರೆಸಿಡೆಂಟ್

ಬಿಹಾರದಲ್ಲಿ ಕಾಂಗ್ರೆಸ್- ಆರ್’ಜೆಡಿ ಸರ್ಕಾರ; ಇಂಡಿಯಾ ಟುಡೇ ಸಮೀಕ್ಷೆ

ನಾಲ್ಕು ಚಕ್ರ ವಾಹನಗಳಿಗೆ ಇನ್ನು ಫಾಸ್ಟ್ ಟ್ಯಾಗ್ ಕಡ್ಡಾಯ

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!