Thursday, June 17, 2021

1,800 ಗುತ್ತಿಗೆ ಆಯುಷ್ ವೈದ್ಯರ ಸಾಮೂಹಿಕ ರಾಜೀನಾಮೆ, 20 ಸಾವಿರ ಕ್ಲಿನಿಕ್ ಬಂದ್

ಬೆಂಗಳೂರು: ರಾಜ್ಯದ 1,800 ಮಂದಿ ಸರ್ಕಾರಿ ಗುತ್ತಿಗೆ ಆಯುಷ್ ವೈದ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.
ವೇತನ ತಾರತಮ್ಯ ಬಗೆಹರಿಸುವಂತೆ ಹಾಗೂ ಖಾಸಗಿ ಆಯುಷ್ ವೈದ್ಯರಿಗೂ ತುರ್ತು ಪರಿಸ್ಥಿತಿಯಲ್ಲಿ ಅಲೋಪತಿ ಔಷಧ ನೀಡಲು ಅವಕಾಶ ನೀಡುವಂತೆ ಒತ್ತಾಯಿಸಿದ್ದಾರೆ.
ರಾಜ್ಯಾದ್ಯಂತ 20 ಸಾವಿರಕ್ಕೂ ಹೆಚ್ಚು ಖಾಸಗಿ ಆಯುಷ್ ಕ್ಲಿನಿಕ್ ಗಳನ್ನು ಮುಚ್ಚಿರುವ ಆಯುಷ್ ವೈದ್ಯರು, ಅನಿರ್ದಿಷ್ಟಾವಧಿ ಸೇವಾ ಬಹಿಷ್ಕಾರ ಮುಂದುವರೆಸಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಕೊರೋನಾ ನಿಯಂತ್ರಣ ಸೇವೆಯಿಂದ ಬಹುತೇಕ ಆಯುಷ್ ವೈದ್ಯರು ಹಿಂದೆ ಸರಿದಿದ್ದು, ವೈದ್ಯ ಸಿಬ್ಬಂದಿ ಕೊರತೆ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆಯಿದೆ.
ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರನ್ನು ಭೇಟಿ ಮಾಡಿ ಎಲ್ಲಾ ವೈದ್ಯರ ರಾಜೀನಾಮೆ ಪತ್ರ ನೀಡಿದ್ದೇವೆ. ಅವರು ರಾಜೀನಾಮೆ ಅಂಗೀಕರಿಸಲು ಒಪ್ಪಿಲ್ಲ. ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಸಭೆ ನಡೆಸಿ ನಮ್ಮ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ. ಅಲ್ಲಿಯವರೆಗೂ ನಮ್ಮ ಸೇವೆ ಬಹಿಷ್ಕರಿಸಿದ್ದೇವೆಂದು ಭಾರತೀಯ ಆಯುಷ್ ವೈದ್ಯರ ಒಕ್ಕೂಟ ತಿಳಿಸಿದೆ.
ಖಾಸಗಿ ಆಯುಷ್ ವೈದ್ಯರಿಗೆ ಸಮಗ್ರ ತರಬೇತಿ ನೀಡಬೇಕು. ನಮಗೂ ಸಮಾನ ವೇತನ ಬೇಕು. ಕೊರೋನಾದಿಂದ ಸತ್ತರೆ ನಮಗೂ ರೂ.50 ಲಕ್ಷ ಪರಿಹಾರ ನೀಡಬೇಕು. ಈಗಾಗಲೇ ಸಾಕಷ್ಟು ಆಯುಷ್ ವೈದ್ಯರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಆಯುಷ್ ಫೆಡರೇಶನ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಡಾ.ಮಹವೀರ್ ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಅರಾವಳಿ ಪರ್ವತ ಭೂಮಿ ಅತಿಕ್ರಮಣ ತೆರವು: ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

newsics.com ನವದೆಹಲಿ: ಅರಾವಳಿ ಪರ್ವತ ವ್ಯಾಪ್ತಿಯ ಭೂ ಪ್ರದೇಶದಲ್ಲಿ ನಿರ್ಮಿಸಲಾಗಿರುವ 10000 ವಸತಿ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಯಾವುದೇ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಜೂನ್ ಏಳರಂದು...

ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ತಡೆ

newsics.com ಬೆಂಗಳೂರು: ರಾಜ್ಯ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ 2020-21 ರ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 15 ದಿನಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಸರ್ಕಾರ ಹೇಳಿದ್ದು, ಈ...

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ನೀಡಿದ ಯೋಗೇಶ್ವರ್

newsics.com ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಕೂಡ ರಾಜ್ಯ ಬಿಜೆಪಿ ನಾಯಕರ ಜತೆ ಸಮಾಲೋಚನೆ ಮುಂದುವರಿಸಿದ್ದಾರೆ. ಈ ಮಧ್ಯೆ  ಅರುಣ್...
- Advertisement -
error: Content is protected !!