Tuesday, April 13, 2021

ಸಿಐಡಿಗೆ ಮಯ್ಯ ಆತ್ಮಹತ್ಯೆ ಪ್ರಕರಣ

ಬೆಂಗಳೂರು: ನಗರದ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿ ಸಿಇಓ ವಾಸುದೇವ ಮಯ್ಯ ಆತ್ಮಹತ್ಯೆ ಪ್ರಕರಣ ಸಿಐಡಿಗೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕೋ ಆಪರೇಟಿವ್ ಸೊಸೈಟಿ 1400 ಕೋಟಿ ರೂ. ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದ್ದ ವೇಳೆಯಲ್ಲೇ ವಾಸುದೇವ ಮಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಅವರ ಆತ್ಮಹತ್ಯೆ ಪ್ರಕರಣವನ್ನೂ ಸಿಐಡಿಗೆ ವರ್ಗಾಯಿಸಿರುವುದಾಗಿ ರಾಜ್ಯ ಗೃಹ ಇಲಾಖೆ ತಿಳಿಸಿದೆ.
ಮಯ್ಯ ಅವರ ಪುತ್ರಿ ದೂರಿನ ಹಿನ್ನೆಲೆಯಲ್ಲಿ ಡೆತ್ ನೋಟ್’ನಲ್ಲಿ ಉಲ್ಲೇಖಗೊಂಡಿದ್ದ 11 ಜನರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಆತ್ಮಹತ್ಯೆ ಸಂದರ್ಭದಲ್ಲಿ ಕಾರಿನಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಅದರಲ್ಲಿ ಸೊಸೈಟಿಯಿಂದ ಸಾಲ ಪಡೆದವರು ಹಾಗೂ ಬ್ಯಾಂಕ್ ನ ಅಧಿಕಾರಿಗಳ ಹೆಸರು ಸಹ ಉಲ್ಲೇಖವಾಗಿದೆ. ಇದೀಗ ಡೆತ್ ನೋಟ್ ನಲ್ಲಿ ಇರುವ ಹೆಸರುಗಳು ಹಾಗೂ ಸಿಐಡಿ ತನಿಖೆ ವೇಳೆ ಪತ್ತೆಯಾದ ವ್ಯಕ್ತಿಗಳಿಗೆ ಸಾಮ್ಯತೆ ಇದ್ದು ಎರಡು ಪ್ರಕರಣದ ತನಿಖೆ ಹೊಣೆಯನ್ನು ಸಿಐಡಿಗೆ ವಹಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!