Saturday, April 17, 2021

ಬಿಎಂಟಿಸಿ ಸಿಬ್ಬಂದಿಗೂ ವೈದ್ಯಕೀಯ ತಪಾಸಣೆ ಕಡ್ಡಾಯ

ಬೆಂಗಳೂರು: ಕೊರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಎಲ್ಲ ಬಿಎಂಟಿಸಿ ಸಿಬ್ಬಂದಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಸೂಚಿಸಿದೆ.
ಹೊಸದಾಗಿ ಹಾಜರಾಗುವ ಪ್ರತಿಯೊಬ್ಬ ಸಿಬ್ಬಂದಿಯನ್ನು ಸಂಸ್ಥೆಯ ಮುಖ್ಯ ವೈದ್ಯಾಧಿಕಾರಿಗಳ ಮೂಲಕ ತಪಾಸಣೆ ಗೊಳಪಡಿಸಬೇಕೆಂದು ಬಿಎಂಟಿಸಿ ನಿರ್ದೇಶನ ನೀಡಿದೆ. ವೈದ್ಯಕೀಯ ಪ್ರಮಾಣ ಪತ್ರ ಪಡೆದ ನಂತರವೇ ಕರ್ತವ್ಯಕ್ಕೆ ವರದಿ ಮಾಡಿಸಿಕೊಳ್ಳಬೇಕು. ಎಲ್ಲ ಘಟಕ ಕಾರ್ಯ ಸ್ಥಳದಲ್ಲಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವ ಮುನ್ನ ಪ್ರತಿದಿನ ಪ್ರತಿಯೊಬ್ಬ ನೌಕರರನ್ನು ಥರ್ಮಲ್ ಸ್ಕ್ಯಾನರ್ ಮೂಲಕ ತಪಾಸಣೆ ಮಾಡಬೇಕೆಂದು ಬಿಎಂಟಿಸಿಯ ಭದ್ರತಾ ಮತ್ತು ಜಾಗೃತಾ ನಿರ್ದೇಶಕರು ಸೂಚಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!