ಬೆಂಗಳೂರು: ಜನದಟ್ಟಣೆ ವೇಳೆ ಇನ್ಮುಂದೆ ನಾಲ್ಕು ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸಲಿದೆ.
ಈ ಬಗ್ಗೆ ಮಹೈತಿ ನೀಡಿರುವ ಬಿಎಂಆರ್ಸಿಎಲ್, ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದೆ.
ಜನದಟ್ಟಣೆ ಇಲ್ಲದ ಸಮಯದಲ್ಲಿ ಪ್ರತಿ ಹತ್ತು ನಿಮಿಷಕ್ಕೊಂದು ಮೆಟ್ರೋ ರೈಲು ಸಂಚರಿಸಲಿದೆ.
ನಾಗಸಂದ್ರ-ಯಲಚೇನಹಳ್ಳಿ ಮಾರ್ಗದಲ್ಲಿ ಆರು ಬೋಗಿಗಳ ರೈಲುಗಳ ಸಂಖ್ಯೆ ಹೆಚ್ಚಿಸಲಾಗುತ್ತಿದ್ದು, ಈವರೆಗೆ ಒಟ್ಟು 19 ರೈಲುಗಳಲ್ಲಿ ಮೂರು ಬೋಗಿಗಳ ಬದಲಾಗಿ ಆರು ಬೋಗಿಗಳನ್ನು ಅಳವಡಿಸಲಾಗಿದೆ.
ಜನದಟ್ಟಣೆ ವೇಳೆ 4 ನಿಮಿಷಕ್ಕೊಂದು ಮೆಟ್ರೋ ರೈಲು
Follow Us