Saturday, June 10, 2023

ರಾಜ್ಯ ಸರ್ಕಾರಿ ನೌಕರರಿಗೂ ಮಿಲಿಟರಿ ಕ್ಯಾಂಟೀನ್ ಮಾದರಿ ಸೌಲಭ್ಯ

Follow Us

ಬೆಂಗಳೂರು: ಮಿಲಿಟರಿ ಕ್ಯಾಂಟೀನ್ ಮಾದರಿಯ ಸೌಲಭ್ಯ ರಾಜ್ಯ ಸರ್ಕಾರಿ ನೌಕರರಿಗೂ ಸಿಗಲಿದೆ.

ರಾಜ್ಯ ಸರ್ಕಾರಿ ನೌಕರರ ಸಂಘ ಈ ಸೌಲಭ್ಯ ನೀಡಲು ಮುಂದಾಗಿದ್ದು, ಮೊದಲ ಹಂತದಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಈ ಸೌಲಭ್ಯ ಲಭ್ಯವಾಗಲಿದೆ.

ಜ.15ರಂದು ಶಿವಮೊಗ್ಗ, ಬೆಳಗಾವಿ ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸರ್ಕಾರಿ ನೌಕರರ ಕ್ಯಾಂಟೀನ್ ಆರಂಭವಾಗಲಿದೆ. ಇಲ್ಲಿ ಆಹಾರ ಧಾನ್ಯ, ದೈನಂದಿನ ಮನೆ ಬಳಕೆ ವಸ್ತು, ಫ್ರಿಡ್ಜ್, ವಾಷಿಂಗ್ ಮಷೀನ್ ಮೊದಲಾದವು ಶೇ.10 ರಿಂದ 40 ರ ರಿಯಾಯಿತಿ ದರದಲ್ಲಿ ಸಿಗಲಿದೆ.

ಕ್ಯಾಂಟೀನ್ ಆರಂಭಕ್ಕಾಗಿ ಸಾಯಿ ಇಂಟರ್ನ್ಯಾಷನಲ್ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಬೆಳಗ್ಗೆ 10 ರಿಂದ ರಾತ್ರಿ 8ರವರೆಗೆ ಕ್ಯಾಂಟೀನ್ ಗಳು ವಹಿವಾಟು ನಡೆಸಲಿವೆ. ಮುಂದಿನ ಹಂತದಲ್ಲಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಈ ಕ್ಯಾಂಟೀನ್ ಗಳು ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಮರಾಜನಗರ: ಮರಿ ಆನೆ ಅಟ್ಯಾಕ್, ಬೈಕ್ ಸವಾರ ಜಸ್ಟ್ ಮಿಸ್

Newsics.com ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗಡಿ ಭಾಗದ ನಾಲ್ ರೋಡ್ ಚೆಕ್ ಪೋಸ್ಟ್ ಬಳಿ ಆನೆ ಮರಿಯೊಂದು ದ್ವಿಚಕ್ರ...

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ...

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...
- Advertisement -
error: Content is protected !!