newsics.com
ಬೆಂಗಳೂರು: ಮಂಡ್ಯ ಹಾಲು ಒಕ್ಕೂಟದಲ್ಲಿ ನಡೆದಿದೆಯೆನ್ನಲಾದ ಭಾರೀ ಹಗರಣ ಕುರಿತು ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಈ ಘೋಷಣೆ ಮಾಡಿದ್ದಾರೆ. ರೈತರಿಂದ ಹಾಲು ಖರೀದಿಸಿದ ಬಳಿಕ ಮಾರ್ಗ ಮಧ್ಯೆ ಟ್ಯಾಂಕರ್ ನಿಂದ ಹಾಲು ಕಳ್ಳತನ ಮಾಡಿ ಬಳಿಕ ನೀರು ತುಂಬಿಸಿ ಹಾಲು ಒಕ್ಕೂಟಕ್ಕೆ ಪೂರೈಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.
ತನಿಖೆ ವೇಳೆ ಈ ಅವ್ಯವಹಾರ ಬೆಳಕಿಗೆ ಬಂದಿತ್ತು. ಇದೀಗ ಹಲವು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಸಿಐಡಿ ತನಿಖೆಗೆ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.