ಬೆಂಗಳೂರು: ಕೊರೋನಾ ಪರೀಕ್ಷೆ ನಡೆಸಿರುವ ಸಚಿವ ಅಶೋಕ್ ವರದಿ ನೆಗೆಟಿವ್ ಬಂದಿದೆ. ಅಶೋಕ್ ಅವರೇ ಸಾಮಾಜಿಕ ಜಾಲ ತಾಣದಲ್ಲಿ ಇದನ್ನು ಬಹಿರಂಗಪಡಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಜತೆಗಿನ ನಿಕಟ ಸಂಪರ್ಕದ ಹಿನ್ನೆಲೆಯಲ್ಲಿ ಸಚಿವ ಅಶೋಕ್ ಅವರು ಕ್ವಾರಂಟೈನ್ ಗೆ ಒಳಗಾಗಿದ್ದರು.
ಇದೀಗ ಕೊರೋನಾ ಪರೀಕ್ಷಾ ವರದಿ ಬಂದಿದ್ದು, ನೆಗೆಟಿವ್ ಎಂದು ದೃಢೀಕರಿಸಲಾಗಿದೆ. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸಲು ಮುಂದಿನ ದಿನಗಳಲ್ಲಿ ಸಕ್ರಿಯ ಪಾತ್ರ ನಿರ್ವಹಿಸುವುದಾಗಿ ಅಶೋಕ್ ಹೇಳಿದ್ದಾರೆ.