Wednesday, October 5, 2022

ಸಚಿವ ಸಿ.ಟಿ. ರವಿ ರಾಜೀನಾಮೆ ಅಂಗೀಕಾರ

Follow Us

newsics.com
ಬೆಂಗಳೂರು: ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರ ರಾಜೀನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂಗೀಕರಿಸಿದ್ದಾರೆ.
ಕಳೆದ ಅಕ್ಟೋಬರ್ 3 ರಂದು ಸಚಿವ ಸ್ಥಾನಕ್ಕೆ ಸಿ.ಟಿ. ರವಿ ರಾಜೀನಾಮೆ ಸಲ್ಲಿಸಿದ್ದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸಿ.ಟಿ. ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ನೇಮಕ ಮಾಡಿದ್ದರು. ಹೀಗಾಗಿ ಸಚಿವ ಸ್ಥಾನಕ್ಕೆ ಸಿ.ಟಿ. ರವಿ ರಾಜೀನಾಮೆ ಸಲ್ಲಿಸಿದ್ದರು.
ಸಚಿವ ಸ್ಥಾನಕ್ಕೆ ರವಿ ಅವರು ರಾಜೀನಾಮೆ ನೀಡಿ ಹಲವು ದಿನಗಳಾಗಿದ್ದರೂ ಕೆಲವು ಕಾರಣಗಳಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜೀನಾಮೆಯನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಿರಲಿಲ್ಲ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಮುಗಿದ ನಂತರ ರಾಜೀನಾಮೆ ಅಂಗೀಕಾರವಾಗುತ್ತದೆ ಎಂದು ಹೇಳಲಾಗಿತ್ತು. ಅದರಂತೆಯೇ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನಲ್ಲಿ ಶನಿವಾರ ನಡೆದಿದೆ. ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿಟಿ ರವಿ ರಾಜೀನಾಮೆ ಅಂಗೀಕಾರಕ್ಕೆ ರಾಜ್ಯಪಾಲರಿಗೆ ಕಳುಹಿಸಿದ್ದರು. ರಾಜ್ಯದಲ್ಲಿ ಮೈತ್ರಿ ಸರ್ಕಾರ ಪತನವಾಗಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಸಚಿವರು ನೀಡುವ ಮೊದಲ ರಾಜೀನಾಮೆ ಪ್ರಕರಣ ಇದಾಗಿದೆ.

ಕಮಲ್ ಹಾಸನ್ ಬರ್ತಡೇ: ಹಳೆಯ ಫೋಟೋ ಹಂಚಿಕೊಂಡ ಪುತ್ರಿಯರು

ಕಾಮಾಕ್ಯ ದೇವಿಗೆ 19 ಕೆ.ಜಿ ಚಿನ್ನ ದಾನ ಮಾಡಿದ ಅಂಬಾನಿ

ಮುಂದಿನ ಏಪ್ರಿಲ್‌-ಮೇನಲ್ಲಿ ಐಪಿಎಲ್‌

ಕೊರೋನಾ ಲಸಿಕೆಗಾಗಿ ಜನಸಾಮಾನ್ಯರು 2022ರವರೆಗೂ ಕಾಯಬೇಕು

ರಾಜ್ಯದ ಹಲವೆಡೆ ನಾಳೆ, ನಾಡಿದ್ದು ಭಾರೀ ಮಳೆ ಸಾಧ್ಯತೆ

ಮತ್ತಷ್ಟು ಸುದ್ದಿಗಳು

vertical

Latest News

ಪ್ರಪಾತಕ್ಕೆ ಉರುಳಿದ ಬಸ್: 25 ಮಂದಿ ಸಾವು, 23 ಪ್ರಯಾಣಿಕರಿಗೆ ಗಾಯ

newsics.com ಪೌರಿ (ಉತ್ತರಾಖಂಡ): ಬಸ್ಸೊಂದು 500 ಮೀಟರ್ ಪ್ರಪಾತಕ್ಕೆ ಉರುಳಿದ ಪರಿಣಾಮ 25 ಪ್ರಯಾಣಿಕರು ಸಾವನ್ನಪ್ಪಿದ ಭೀಕರ ದುರಂತ ಉತ್ತರಾಖಂಡದ ಪೌರಿ ಗರ್ವಾಲ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ...

ಜಂಬೂಸವಾರಿಗೆ ಕ್ಷಣಗಣನೆ: ಇಂದು ಮಧ್ಯಾಹ್ನ ಚಾಲನೆ

newsics.com ಮೈಸೂರು: ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಬುಧವಾರ(ಅ.5) ಮಧ್ಯಾಹ್ನ 3 ಗಂಟೆ ಹೊತ್ತಿಗೆ ಜಂಬೂಸವಾರಿ ಆರಂಭಗೊಳ್ಳಲಿದೆ. ಬುಧವಾರ ಮಧ್ಯಾಹ್ನ 2.36ರಿಂದ 2.50ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ...

ದೇಶದ ಗಡಿಯಲ್ಲಿ ಶೃಂಗೇರಿ ಶಾರದೆಗೆ ಪೂಜೆ: ಇಂದು‌ ಮೂರ್ತಿ ಹಸ್ತಾಂತರ

newsics.com ಚಿಕ್ಕಮಗಳೂರು: ಭಾರತದ ಗಡಿಯಲ್ಲೂ ಶೃಂಗೇರಿಯ ಶಾರದೆ ಪೂಜೆಗೊಳ್ಳಲಿದ್ದಾಳೆ. ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಪ್ರದೇಶ ತೀತ್ವಾಲ್‌ನಲ್ಲಿ ನಿರ್ಮಾಣವಾಗುತ್ತಿರುವ ದೇಗುಲಕ್ಕೆ ಶೃಂಗೇರಿ ಮಠದಿಂದ ಶಾರದೆಯ ಪಂಚಲೋಹ ವಿಗ್ರಹ ರವಾನೆಯಾಗಲಿದೆ. ಈ ವಿಗ್ರಹ ಹಸ್ತಾಂತರ ಕಾರ್ಯ ವಿಜಯದಶಮಿ ದಿನವಾರ...
- Advertisement -
error: Content is protected !!