Tuesday, April 13, 2021

ಸಚಿವ ರವಿ ಎರಡನೇ ಬಾರಿಗೆ ಕ್ವಾರಂಟೈನ್

ಚಿಕ್ಕಮಗಳೂರು: ಸಚಿವ ಸಿ.ಟಿ. ರವಿ ಅವರಿಗೆ ಮತ್ತೆ ಕೊರೋನಾ ಆತಂಕ ಶುರುವಾಗಿದ್ದು, ಎರಡನೇ ಬಾರಿಗೆ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಸಚಿವರು ಈಗಾಗಲೇ ಕೊರೋನಾ ಪರೀಕ್ಷೆ ಮಾಡಿಸಿದ್ದು, ವರದಿಗಾಗಿ ಸಚಿವರು ಕಾಯುತ್ತಿದ್ದಾರೆ. ಈಗಾಗಲೇ ನಗರಸಭೆ ಮಾಜಿ ಸದಸ್ಯರ ಏರಿಯಾವನ್ನು ಕೂಡ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೋನಾ ಆತಂಕ ಮನೆ ಮಾಡಿದ್ದು, ವಿಧಾನಪರಿಷತ್ ಸದಸ್ಯರೊಬ್ಬರ ಜತೆ ಸಂಪರ್ಕದಲ್ಲಿದ್ದ ಚಿಕ್ಕಮಗಳೂರು ನಗರದ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬಿಜೆಪಿ ನಗರಸಭಾ ಸದಸ್ಯರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಈಗಾಗಲೇ ಮೂವರನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಧಾನಪರಿಷತ್ ಸದಸ್ಯ ಎಂಕೆ ಪ್ರಾಣೇಶ್ ಅವರೊಂದಿಗೆ ಸಂಪರ್ಕದಲ್ಲಿದ್ದ ಚಿಕ್ಕಮಗಳೂರು ನಗರದ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬಿಜೆಪಿ ನಗರಸಭಾ ಸದಸ್ಯರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇವರಿಬ್ಬರೂ ಸಿಟಿ ರವಿ ಅವರ ಜತೆ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಸಚಿವ ಸಿಟಿ ರವಿ ಅವರು ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!