Sunday, July 3, 2022

ಸಚಿವ ಸೋಮಶೇಖರ್‌, ಶಾಸಕ ಜಿಟಿಡಿಗೆ ಕೊರೋನಾ ಸೋಂಕು

Follow Us

ಮೈಸೂರು: ಸಹಕಾರ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ ಸೋಮಶೇಖರ್‌, ಶಾಸಕ ಜಿ.ಟಿ ದೇವೇಗೌಡ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಈ ಬಗ್ಗೆ ಶಾಸಕ ಜಿ.ಟಿ. ದೇವೇಗೌಡ ಅವರು ಟ್ವಿಟ್ಟರ್’ನಲ್ಲಿ ಬರೆದುಕೊಂಡಿದ್ದು, ನನಗೆ ಹಾಗೂ ಸಚಿವರಾದ ಎಸ್.ಟಿ.ಸೋಮಶೇಖರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಮಶೇಖರ್ ಅವರು ಶೀಘ್ರ ಗುಣಮುಖರಾಗಿ ಜನಸೇವೆಯಲ್ಲಿ ತೊಡಗುವಂತಾಗಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುವುದಾಗಿ ಬರೆದುಕೊಂಡಿದ್ದಾರೆ.
ಸೋಮಶೇಖರ್ ಅವರ ಆಪ್ತ ಸಹಾಯಕನಿಗೆ ಜು.28 ರಂದು ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಸಚಿವರನ್ನು ಒಂದು ವಾರಗಳ ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಅಲ್ಲದೆ, ಅವರ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿತ್ತು. 7 ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಕೂಡ ವಿಧಿಸಲಾಗಿದೆ.
ನಾನೂ ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ ಏಳು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು ಕೂಡಲೇ ಕ್ವಾರೆಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!