Tuesday, April 13, 2021

ಕೊರೋನಾ ಸಾವಿನ ಪ್ರಮಾಣ ಹೆಚ್ಚಳಕ್ಕೆ ಸಚಿವ ಸುಧಾಕರ್ ಆತಂಕ

 ♦ ತಿಂಗಳಲ್ಲಿ 25 ಸಾವಿರ ಬೆಡ್‌ಗಳ ಕೋವಿಡ್ ಕೇರ್ ಸೆಂಟರ್ ಕಾರ್ಯಾರಂಭ 

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೋನಾ ಸೋಂಕಿತರು ದಿನೇದಿನೆ ಸಾವನ್ನಪ್ಪುತ್ತಿರುವ ಬಗ್ಗೆ ನನಗೆ ಆತಂಕ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಇಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾದಿಂದ ಸಾವಿಗೀಡಾಗುವವರ ಹಾಗೂ ಸೋಂಕಿಗೊಳಗಾಗುವವರ ಸಂಖ್ಯೆ ಹೆಚ್ಚುತ್ತಿರುವುದರ ಬಗ್ಗೆ ಕಳವಳ ವ್ಯಕ್ತಪಡಿಸಿದರು.
ಕೊರೋನಾ ತೀವ್ರವಾಗುತ್ತಿದ್ದರೂ ಗುಣಮುಖರಾಗುತ್ತಿರುವ ಸೋಂಕಿತರ ಸಂಖ್ಯೆ ಶೇ.60 ರಷ್ಟಿದೆ. ರೋಗ ತೀವ್ರವಾದವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಹೇಳಿದರು.
ಕೊರೋನಾ ಅಬ್ಬರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, 25 ಸಾವಿರ ಬೆಡ್‌ಗಳ ಕೋವಿಡ್ ಕೇರ್ ಸೆಂಟರ್ ಸಿದ್ಧಪಡಿಸಲಾಗುತ್ತಿದ್ದು, ತಿಂಗಳೊಳಗೆ ಕಾರ್ಯಾರಂಭ ಮಾಡಲಿದೆ ಎಂದು ಸುಧಾಕರ್ ತಿಳಿಸಿದರು.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!