newsics.com
ವಿಜಯಪುರ: ನಟ ಸುದೀಪ್ ಅಭಿನಯನದ ಬಹು ನಿರೀಕ್ಷಿತ ಕೋಟಿಗೊಬ್ಬ – 3 ಚಿತ್ರ ತೆರೆ ಕಾಣದಿರುವುದನ್ನು ಪ್ರತಿಭಟಿಸಿ ರಾಜ್ಯದ ಹಲವೆಡೆ ಕಿಚ್ಚ ಸುದೀಪ್ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.
ವಿಜಯಪುರದಲ್ಲಿ ಡ್ರೀಮ್ ಲ್ಯಾಂಡ್ ಚಿತ್ರ ಮಂದಿರದ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ರಸ್ತೆಯಲ್ಲಿ ನಿಂತಿದ್ದ ವ್ಯಕ್ತಿಯೊಬ್ಬ ಸಿನೆಮಾ ಮಂದಿರವನ್ನು ಗುರಿಯಾಗಿರಿಸಿ ಕಲ್ಲಿನಿಂದ ದಾಳಿ ನಡೆಸಿದ್ದಾನೆ. ಚಿತ್ರಮಂದಿರದ ಗಾಜು ಹುಡಿಯಾಗಿದೆ.
ಇನ್ನು ಬೆಂಗಳೂರಿನಲ್ಲಿ ಸುದೀಪ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭೂಮಿಕಾ ಚಿತ್ರಮಂದಿರಕ್ಕೆ ಬಿಗಿ ಭದ್ರತೆ ಒದಗಿಸಲಾಗಿದೆ. ಕೆಲವು ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ