ಕೊಪ್ಪಳ: ಶಾಸಕ ಹಾಲಪ್ಪ ಆಚಾರ್ ಅವರಿಗೂ ಕೊರೋನಾ ಸೋಂಕು ತಗುಲಿದ್ದು, ಕ್ವಾರಂಟೈನ್’ನಲ್ಲಿದ್ದಾರೆ.
ಈಗಾಗಲೇ ಜಿಲ್ಲೆಯ ಶಾಸಕರಾದ ರಾಘವೇಂದ್ರ ಹಿಟ್ನಾಳ್ ಹಾಗೂ ಪರಣ್ಣ ಮುನವಳ್ಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಮಾಹಿತಿ ಹಂಚಿಕೊಂಡಿರುವ ಕೊಪ್ಪಳ ಜಿಲ್ಲೆಯ ಯಲಬುರ್ಗ ವಿಧಾನಸಭಾ ಕ್ಷೇತ್ರದ ಶಾಸಕ ಹಾಲಪ್ಪ ಆಚಾರ್, ಸ್ವಯಂ ಕೋವಿಡ್ ತಪಾಸಣೆ ಮಾಡಿಸಿಕೊಂಡಾಗ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ವೈದ್ಯರ ಸಲಹೆಯನ್ವಯ ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ. ತಮ್ಮೆಲ್ಲರ ಹಾರೈಕೆಯಿಂದ ಆರೋಗ್ಯವಾಗಿದ್ದು, ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿರುವವರಲ್ಲಿ ಯಾರಿಗಾದರೂ ಸೋಂಕಿನ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ತಪಾಸಣೆ ಮಾಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ 1852, ರಾಜ್ಯದಲ್ಲಿ 5172 ಮಂದಿಗೆ ಸೋಂಕು, 98 ಜನ ಬಲಿ