ಬಳ್ಱಾರಿ: ಅಲ್ಪ ಸಂಖ್ಯಾತರ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಶಾಸಕ ಸೋಮಶೇಖರ್ ರೆಡ್ಡಿ ಮನೆ ಮುಂದೆ ಧರಣಿ ನಡೆಸಲು ಶಾಸಕ ಜಮೀರ್ ಅಹಮ್ಮದ್ ಬಳ್ಳಾರಿಗೆ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮಶೇಖರ್ ಮನೆ ಮುಂದೆ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ. ಇದೇ ವೇಳೆ ಯಾವುದೇ ರೀತಿಯ ಧರಣಿಗೆ ಅನುಮತಿ ನೀಡಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಸೋಮಶೇಖರ್ ರೆಡ್ಡಿ ಹೇಳಿಕೆ ಹಿನ್ನೆಲೆಯಲ್ಲಿ ಜಮೀರ್ ಅವರ ನಿವಾಸದ ಮುಂದೆ ಧರಣಿ ನಡೆಸುವ ಸವಾಲು ಹಾಕಿದ್ದರು.