Saturday, April 17, 2021

ವಿಧಾನಸಭೆಯಲ್ಲಿ ಶರ್ಟ್ ಬಿಚ್ಚಿದ ಶಾಸಕ ಸಂಗಮೇಶ್

newsics.com

ಬೆಂಗಳೂರು:  ರಾಜ್ಯ ವಿಧಾನಸಭೆಯಲ್ಲಿ ಕಲಾಪದ ವೇಳೆ ಶಾಸಕ ಸಂಗಮೇಶ್ ಶರ್ಟ್ ಬಿಚ್ಚಿ ವಿಚಿತ್ರವಾಗಿ ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸ್ಪೀಕರ್ ಕಾಗೇರಿ, ಸದನದ ಗೌರವ ಕಾಪಾಡಿಕೊಳ್ಳಿ. ಇದು ರಸ್ತೆಯಲ್ಲ ಎಂದು ಅವರಿಗೆ ಎಚ್ಚರಿಕೆ ನೀಡಿದರು.

ಭದ್ರಾವತಿ ಶಾಸಕರಾಗಿರುವ ಸಂಗಮೇಶ್  ಸರ್ಕಾರ ತನ್ನ ವಿರುದ್ಧ ಸೇಡಿನ ರಾಜಕಾರಣ ನಡೆಸುತ್ತಿದೆ ಎಂದು ಆರೋಪಿಸಿದರು. ತಮ್ಮ ವಿರುದ್ಧ ಅನಗತ್ಯ ಮೊಕದ್ದಮೆ ಹೂಡಲಾಗಿದೆ ಎಂದು ಸದನದಲ್ಲಿ ಹೇಳಿದರು. ಸದನದಲ್ಲಿ ಶಿಸ್ತಿನಿಂದ ವರ್ತಿಸದಿದ್ದರೆ ಸದನದಿಂದ ಹೊರಹಾಕುವುದಾಗಿ ಸ್ಪೀಕರ್ ಇದೇ ಸಂದರ್ಭದಲ್ಲಿ ಎಚ್ಚರಿಕೆ  ನೀಡಿದರು.

ಅಂತಿಮವಾಗಿ ಡಿ ಕೆ ಶಿವಕುಮಾರ್, ಸಂಗಮೇಶ್ ಅವರನ್ನು ಸಮಾಧಾನಪಡಿಸಲು ಯತ್ನಿಸಿದರು. ನ್ಯಾಯ ಸಿಗುವವರೆಗೂ ಧರಣಿ ನಡೆಸುತ್ತೇನೆ ಎಂದು ಸಂಗಮೇಶ್ ಹೇಳಿದ್ದಾರೆ.

10 ತಿಂಗಳಲ್ಲಿ ಇಂದು ಕನಿಷ್ಟ ಮಟ್ಟಕ್ಕೆ ಕುಸಿದ ಚಿನ್ನದ ದರ

ಮತ್ತಷ್ಟು ಸುದ್ದಿಗಳು

Latest News

ಕೊರೋನಾ ಸೋಂಕಿತರ ಚಿಕಿತ್ಸೆಗೆ ‌ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆ ಇಳಿಕೆ

newsics.com ನವದೆಹಲಿ: ಕೊರೋನಾ ಸೋಂಕಿತ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್​ಡಿಸಿವಿರ್ ಇಂಜೆಕ್ಷನ್ ಬೆಲೆಯನ್ನು ಫಾರ್ಮಾ ಕಂಪೆನಿಗಳು ‌ಸ್ವಪ್ರೇರಣೆಯಿಂದ ಇಳಿಕೆ ಮಾಡಿವೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್...

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17) ಸಂಜೆ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕುಂಭಮೇಳ...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...
- Advertisement -
error: Content is protected !!