ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಸಮಯದಲ್ಲಿ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.
ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರೊಂದಿಗೆ ದ್ವಿತೀಯ ಪಿಯು ಪರೀಕ್ಷೆಯ ವ್ಯವಸ್ಥಿತ ನಿರ್ವಹಣೆ ಕುರಿತು ಸಭೆ ನಡೆಸಿದ ಸುರೇಶ್ ಕುಮಾರ್, ಹಲವು ನಿರ್ದೇಶನಗಳನ್ನು ನೀಡಿದರು.
2020ರ ಮಾರ್ಚ್ ನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು 1016 ತಾತ್ವಿಕ ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ 1014 ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು. ಒಟ್ಟು 246772 ವಿದ್ಯಾರ್ಥಿಗಳು ಹಾಜರಾಗುತ್ತಿದ್ದು, ಅವರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೂಡಲೇ ಪೂರ್ವಭಾವಿ ಕ್ರಮಗಳನ್ನು ಆರಂಬಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಮೊಬೈಲ್ ನಿಷೇಧ: ಸುರೇಶ್ ಕುಮಾರ್
Follow Us