Saturday, June 10, 2023

ಸರ್ ಎಂ.ವಿ. ಜನ್ಮಸ್ಥಳಕ್ಕೆ ಬಂದಿರುವುದು ನನ್ನ ಸೌಭಾಗ್ಯ: ಮೋದಿ

Follow Us

newsics.com

ಬೆಂಗಳೂರು: ಆಧುನಿಕ ಭಾರತಕ್ಕೆ ಮಾದರಿಯಾಗಿರುವ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಹುಟ್ಟಿದ ಪುಣ್ಯಭೂಮಿ ಚಿಕ್ಕಬಳ್ಳಾಪುರಕ್ಕೆ ಇಂದು ನಾನು ಬಂದಿರುವುದು ನನ್ನ ಸೌಭಾಗ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು.

ಚಿಕ್ಕಬಳ್ಳಾಪುರದ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯನ್ನು ಶನಿವಾರ ಲೋಕಾರ್ಪಣೆ ಮಾಡಿದ ಬಳಿಕ ಜನತೆಯನ್ನುದ್ದೇಶಿಸಿ ಮೋದಿ ಮಾತನಾಡಿದರು.

ಕರ್ನಾಟಕದ ನನ್ನ ಸಹೋದರ, ಸಹೋದರಿಯರಿಗೆ ನಮಸ್ಕಾರ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿ, ಕನ್ನಡ ಭಾಷೆ ಹಾಗೂ ಚಿಕ್ಕಬಳ್ಳಾಪುರವನ್ನು ಕೊಂಡಾಡಿದರು.
ಸತ್ಯಸಾಯಿ ಆಶ್ರಮದಿಂದ ಶೈಕ್ಷಣಿಕ, ಸಾಮಾಜಿಕ, ವೈದ್ಯಕೀಯ ಸೇವೆ ನಡೆಯುತ್ತಿದೆ. 2014ಕ್ಕಿಂತ ಮೊದಲು 300ರಷ್ಟು ಮೆಡಿಕಲ್ ಕಾಲೇಜುಗಳಿದ್ದವು. ಇಂದು ದೇಶದಲ್ಲಿ 650ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಕರ್ನಾಟಕದಲ್ಲೇ ಸುಮಾರು 70ಕ್ಕೂ ಹೆಚ್ಚು ಮೆಡಿಕಲ್ ಕಾಲೇಜುಗಳಿವೆ. ಇದಕ್ಕೆ ಡಬಲ್ ಇಂಜಿನ್ ಸರ್ಕಾರ ಕಾರಣ ಎಂದು ಹೇಳಿದರು.

ಮತ್ತಷ್ಟು ಸುದ್ದಿಗಳು

vertical

Latest News

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ಗಡಿಯಲ್ಲಿ ಪಾಕ್ ನಿಗೂಢ ಬಲೂನ್ ಪತ್ತೆ: ಸೇನೆಯಿಂದ ಶೋಧ ಕಾರ್ಯ

Newsics.com ಶ್ರೀನಗರ: ಪಾಕಿಸ್ತಾನದ ಅಂತರಾಷ್ಟ್ರೀಯ ಏರ್‌ಲೈನ್ಸ್ ಲಾಂಛನ ಇರುವ ವಿಮಾನದ ಆಕಾರದ ಅನುಮಾನಾಸ್ಪದ ಬಲೂನ್ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಶನಿವಾರ ಪತ್ತೆಯಾಗಿದೆ.

ಗ್ಯಾರಂಟಿ ಜಾರಿ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್

newsics.com ಬೆಂಗಳೂರು: ರಾಜ್ಯ ಸರ್ಕಾರ ಗ್ಯಾರಂಟಿ ಜಾರಿಗೊಳಿಸಿದ ಬೆನ್ನಲ್ಲೇ ಮದ್ಯದ ಬೆಲೆಯನ್ನು ದುಪ್ಪಟ್ಟು ಮಾಡಿ ಮದ್ಯಪ್ರಿಯರಿಗೆ ಶಾಕ್ ನೀಡಿದೆ. ಕರೆಂಟ್ ಬಿಲ್ ದರ ಏರಿಕೆ ಬಳಿಕ...
- Advertisement -
error: Content is protected !!