ತುಮಕೂರು: ಪ್ರಧಾನಿ ಮೋದಿ ಅವರು ಜ.೨ರ ಭೇಟಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಗಳವಾರ ಇಲ್ಲಿಗೆ ಆಗಮಿಸಿ ಪೂರ್ವಸಿದ್ಧತೆ ಪರಿಶೀಲಿಸಿದರು.
ಪೊಲೀಸ್ ಭದ್ರತೆ ಸೇರಿದಂತೆ ಇತರ ವಿಷುಗಳ ಬಗ್ಗೆ ಮಾಹಿತಿ ಪಡೆದ ಅವರು, ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಸಿದ್ಧಗಂಗಾ ಶ್ರೀಗಳ ಗದ್ದುಗೆ ದರ್ಶನ ಪಡೆದ ಅವರು, ಪ್ರಧಾನಿ ಮೋದಿಯವರು ಸಿದ್ಧಗಂಗಾ ಮಠಕ್ಕೂ ಭೇಟಿ ನೀಡಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿಸಿದರು. ಮೋದಿ ಭೇಟಿ ಹಿನ್ನೆಲೆಯಲ್ಲಿ ಜ.೨ರಂದು ಬೆಳಗ್ಗೆ ೬ರಿಂದ ಸಂಜೆ ೬ರವರೆಗೆ ಭಕ್ತರ ಭೇಟಿಯನ್ನು ರದ್ದುಗೊಳಿಸಲಾಗಿದೆ.
ಮೋದಿ ಭೇಟಿ ಹಿನ್ನೆಲೆ: ತುಮಕೂರಿಗೆ ಸಿಎಂ, ಪರಿಶೀಲನೆ
Follow Us