Friday, January 27, 2023

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

Follow Us

newsics.com

ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ.

ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿತ್ತು. ಈ ಹಣವನ್ನು ಭಾರತೀಯ ಕರೆನ್ಸಿಯಾಗಿ ಪರಿವರ್ತಿಸಿ ಹಲವಾರು ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ.

ಮೈಸೂರಿನಲ್ಲಿ ಹಲವರ ಬ್ಯಾಂಕ್ ಖಾತೆ ಹಣ ಜಮಾವಣೆಗೊಂಡಿದ್ದು, ಹಣದ ಮೂಲ ಪತ್ತೆಗಾಗಿ ಮೈಸೂರಿನಲ್ಲಿ 40ಕ್ಕೂ ಅಧಿಕ ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಇದರೊಂದಿಗೆ ಜಾರ್ಖಂಡ್, ಮ‌ಧ್ಯ ಪ್ರದೇಶ, ತಮಿಳುನಾಡಿನಲ್ಲೂ ಶಾರೀಕ್ ಹಣದ ಮೂಲದ ತನಿಖೆ ನಡೆಯುತ್ತಿದೆ.

ತನಿಖೆ ತೀವ್ರಗತಿಯಲ್ಲಿ ಸಾಗುತ್ತಿದೆ. ಮಂಗಳೂರು ಪೊಲೀಸರ ತಂಡ ಆತನ ಹಣದ ಮೂಲದ ಬಗ್ಗೆ ಮಹತ್ವದ ಮಾಹಿತಿ ಕಲೆ ಹಾಕಿದೆ ಎನ್ನಲಾಗಿದೆ. ಈ ನಡುವೆ ಪ್ರಕರಣದ ತನಿಖೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್‌ಐಎ) ಹಸ್ತಾಂತರಿಸುವ ಅಂತಿಮ ಸಿದ್ಧತೆ ನಡೆದಿದೆ.

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

 

 

 

ಮತ್ತಷ್ಟು ಸುದ್ದಿಗಳು

vertical

Latest News

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ...

ನಟಿ ಅದಿತಿಯ ಮಾಜಿ ಪತಿ‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿಸೈನರ್

newsics.com ಮುಂಬೈ: ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ, ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ನಟ ಸತ್ಯದೀಪ್ ಮಿಶ್ರಾ ಜೊತೆ ಮಸಾಬಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಕುರಿತು ನವಜೋಡಿ...

ಖಗೋಳದ ಅಪರೂಪದ ಅತಿಥಿ ಧೂಮಕೇತು ವಿದಾಯಕ್ಕೆ ಸಿದ್ಧ!

newsics.com ನವದೆಹಲಿ: ಖಗೋಳದ ಅಪರೂಪದ ಅತಿಥಿಯೊಂದು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಖಗೋಳದ ಅಪರೂಪದ ಅತಿಥಿ ಹಸಿರು ಬಣ್ಣದ ಸಿ/2022 ಇ3 ದೀರ್ಘಾವಧಿಯ ಧೂಮಕೇತು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಮತ್ತೆ ಇದರ ಭೇಟಿ ಬರೋಬ್ಬರಿ 50,000...
- Advertisement -
error: Content is protected !!