Wednesday, November 30, 2022

ಮುಂಗಾರು ಚುರುಕು: ರಾಜ್ಯದಲ್ಲಿ ಇಂದಿನಿಂದ ಮಳೆ ಹೆಚ್ಚಳ ಸಾಧ್ಯತೆ

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದಿನಿಂದ (ಜೂ.12) ಮಳೆ ಆರ್ಭಟ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆ ತೀವ್ರಗೊಳ್ಳಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಭಾರೀ ಮಳೆಯಾಗಲಿದೆ. ನಾಲ್ಕೈದು ದಿನ ಮಳೆ ಮುಂದುವರೆಯಲಿದೆ. ಮುಂಜಾಗ್ರತಾ ಕ್ರಮವಾಗಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾದಥಹಿತಿ ನೀಡಿದೆ.

ಜೂನ್ 14 ರಂದು ಮಳೆ ತೀವ್ರತೆ ಹೆಚ್ಚಲಿದ್ದು ಖೊಒ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯಿಂದ ಭೂಕುಸಿತವಾಗುವ ಸಾಧ್ಯತೆಯಿರುವುದರಿಂದ ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಸ್‍ಡಿಆರ್’ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ಕೋಲಾರ, ಚಾಮರಾಜನಗರ, ವಿಜಯಪುರ, ರಾಯಚೂರು, ದಾವಣಗೆರೆ ಜಿಲ್ಲೆಗಳಲ್ಲಿಯೂ ಮಳೆಯಾಗಲಿದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ರಾಜಸ್ಥಾನ, ಮಹಾರಾಷ್ಟ್ರ ಭಾಗದಲ್ಲೂ ಮಳೆಯ ತೀವ್ರತೆ ಹೆಚ್ಚಾಗಲಿದೆ. ಈಗಾಗಲೇ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಶನಿವಾರ ಕರ್ನಾಟಕ, ಛತ್ತೀಸ್‍ಘಡ, ಕೇರಳ, ಮಾಹೆ, ಗೋವಾ, ಅಂಡಮಾನ್ ನಿಕೋಬಾರ್, ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ ರಾಜ್ಯಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!