ಹೊಳೆನರಸೀಪುರ(ಹಾಸನ): ಜನವರಿ ಅಂತ್ಯದೊಳಗೆ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
ಹೊಳೆನರಸೀಪುರ ತಾಲ್ಲೂಕಿನ ಸಿಂಗನಕುಪ್ಪೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಸಾಂತ್ಯದಲ್ಲಿ ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಗಿಯಲಿದೆ ಎಂದರು.
ದಾವೋಸ್ ಭೇಟಿ ಫಲಪ್ರದವಾಗಿದೆ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಬಳಿಕ ಬೇರೆ ಯಾರೂ ಅಲ್ಲಿಗೆ ಹೋಗಿರಲಿಲ್ಲ. ದಾವೋಸ್ ನಲ್ಲಿ 40 ಕೈಗಾರಿಕೋದ್ಯಮಿಗಳನ್ನು ವೈಯಕ್ತಿಕವಾಗಿ ಭೇಟಿಯಾಗಿದ್ದೇನೆ. ದೊಡ್ಡ ಪ್ರಮಾಣದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದೆ ಬರುವ ಭರವಸೆ ಕೊಟ್ಟಿದ್ದಾರೆ ಎಂದರು.
ಮಾ.5ರಂದು ಬಜೆಟ್ ಮಂಡನೆಗೆ ತಯಾರಿ ಮಾಡಿದ್ದೇನೆ. ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದೇನೆ. ಮಹಿಳೆಯರಿಗೆ, ರೈತರಿಗೆ ಹಾಗೂ ಮಕ್ಕಳಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿ ಮಾಡುತ್ತೇನೆ ಎಂದು ಸಿಎಂ ಹೇಳಿದರು.
ತಿಂಗಳಾಂತ್ಯಕ್ಕೆ ಸಂಪುಟ ವಿಸ್ತರಣೆ- ಸಿಎಂ
Follow Us