Monday, November 29, 2021

ಲಾಕ್ ಡೌನ್ ಮುಂದುವರಿದರೆ ಹಸಿವಿನಿಂದಲೇ ಹೆಚ್ಚು ಸಾವು- ಇನ್ಫೋಸಿಸ್ ನಾರಾಯಣಮೂರ್ತಿ ಆತಂಕ

Follow Us

ಬೆಂಗಳೂರು: ಲಾಕ್ ಡೌನ್ ಶೀಘ್ರ ತೆರವಾಗದಿದ್ದರೆ ಕೊರೋನಾಗಿಂತ ಹಸಿವಿನಿಂದಲೇ ಹೆಚ್ಚು ಜನ ಸಾಯಬಹುದು ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಆತಂಕ ವ್ಯಕ್ತಪಡಿಸಿದ್ದಾರೆ.
ಖಾಸಗಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ನಾರಾಯಣ ಮೂರ್ತಿ, ಲಾಕ್ ಡೌನ್ ತುಂಬಾ ದಿನ ಮುಂದವರಿಯಲು ಸಾಧ್ಯವಿಲ್ಲ ಎನ್ನುವ ಸತ್ಯವನ್ನು ನಾವು ಮೊದಲು ಅರಿತುಕೊಳ್ಳಬೇಕು ಎಂದಿದ್ದಾರೆ.
ಕಳೆದ ಎರಡು ತಿಂಗಳ ಅವಧಿಯಲ್ಲಿ ಕೊರೋನಾ ಹಾವಳಿಯಯಿಂದ ದೇಶದಲ್ಲಿ ಸುಮಾರು ಒಂದು ಸಾವಿರ ಜನ ಸಾವನ್ನಪ್ಪಿದ್ದರೂ, ದೇಶದ ಒಟ್ಟಾರೆ ಕೊರೋನಾ ಮತ್ತು ಸಾವಿನ ಪ್ರಮಾಣ ಆತಂಕಾರಿಯಾಗಿಲ್ಲ ಎಂದೂ ನಾರಾಯಣ ಮೂರ್ತಿ ಹೇಳಿದ್ದಾರೆ.
ದೇಶದಲ್ಲಿ ಪ್ರತಿವರ್ಷ ಸರಾಸರಿ 90 ಲಕ್ಷ ಜನ ಸಾಯುತ್ತಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಕೊರೋನಾ ವೈರಸ್‌ನಿಂದಾಗಿ 1,000 ಜನ ಬಲಿಯಾಗಿದ್ದಾರೆ. ಸಹಜ ಸಾವುಗಳಿಗೂ, ಕೊರೊನಾ ಸಾವುಗಳಿಗೂ ತಾಳೆ ಹಾಕಿದರೆ ಕೊರೋನಾದಿಂದ ಉಂಟಾದ ಸಾವುಗಳು ಅತಿ ಕಡಿಮೆ ಎಂದೇ ಹೇಳಬಹುದು ಎಂದು ಹೇಳಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಮಹಿಳಾ ಸಂಸದರೊಂದಿಗೆ ಸೆಲ್ಫಿ ಶೇರ್ ಮಾಡಿ ಲೋಕಸಭೆ ಆಕರ್ಷಕ ಸ್ಥಳ ಎಂದ ಶಶಿ ತರೂರ್, ಕ್ಷಮೆಯಾಚನೆ

newsics.com ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್, ಆರು ಮಹಿಳಾ ಸಂಸದರೊಂದಿಗೆ ತೆಗೆದ ಸೆಲ್ಫಿಯನ್ನು ಹಂಚಿಕೊಂಡಿದ್ದಾರೆ. "ಲೋಕಸಭೆಯು ಕೆಲಸ ಮಾಡಲು ಆಕರ್ಷಕ ಸ್ಥಳವಲ್ಲ ಎಂದು ಯಾರು ಹೇಳುತ್ತಾರೆ?"...

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ ಭಾರತದ ನೆಲದಲ್ಲಿ ಮೊದಲ ಬಾರಿಗೆ ಟೆಸ್ಟ್...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...
- Advertisement -
error: Content is protected !!