Sunday, July 3, 2022

KSRTC, BMTCಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು

Follow Us

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 1000ಕ್ಕೂ ಹೆಚ್ಚು ಮಂದಿಗೆ ಕೊರೋನಾ ಸೋಂಕು ತಗುಲಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಡಿಯಲ್ಲಿ ಬರುವ, ಬೆಂಗಳೂರು ಮಹಾನಗರ ಸಾರಿಗೆ ನಿಗಮ (BMTC), ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NEKRTC) ಹಾಗೂ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC) ಗಳಲ್ಲಿ ಸಾವಿರಕ್ಕೂ ಹೆಚ್ಚು ಕಾರ್ಮಿರಿಗೆ ಕೊವಿಡ್ ತಗುಲಿದೆ.
ಕೋವಿಡ್‌ ಸೋಂಕಿನಿಂದ ಚೇತರಿಸಿಕೊಂಡ ಸಿಬ್ಬಂದಿಯನ್ನು ಇಂದು (ಆ.5) ಸಾರಿಗೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಕೊರೊನಾದಿಂದ ಗುಣಮುಖರಾಗಿದ್ದಕ್ಕೆ ಹೂವು ನೀಡಿ ಶುಭ ಹಾರೈಸಿದರು.
ಸಾವಿರ ಮಂದಿ ಸೋಂಕಿತರ ಪೈಕಿ ಚಾಲಕರು, ನಿರ್ವಾಹಕರೇ ಹೆಚ್ಚು. ಈಗಾಗಲೇ 700 ಸಿಬ್ಬಂದಿ ಕೊರೋನಾ ಸೋಂಕಿನಿಂದ ಚೇತರಿಕೆ ಕಂಡಿದ್ದಾರೆ ಲಕ್ಷ್ಮಣ ಸವದಿ ಮಾಹಿತಿ ನೀಡಿದ್ದಾರೆ. ಅನ್‌ಲಾಕ್‌ ಪ್ರಕ್ರಿಯೆ ಆರಂಭವಾದ ನಂತರ ಮತ್ತೆ ಬಸ್ ಸಂಚಾರ ಆರಂಭವಾಗಿದೆ. ರಾಜ್ಯಾದ್ಯಂತ ಎಲ್ಲ ಕಡೆ ಎಲ್ಲ ವೇಳೆ ಬಸ್ ಸಂಚಾರ ಆರಂಭವಾಗಿದೆ. ಮಾಸ್ಕ್ ಧರಿಸಿ ಚಾಲಕರು, ನಿರ್ವಾಹಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರ ಮಧ್ಯೆಯೂ ಹಲವರಿಗೆ ಸೋಂಕು ತಗುಲಿದೆ. ಇದರಿಂದ ಪ್ರಯಾಣಿಕರು ಆತಂಕಗೊಂಡಿದ್ದಾರೆ.

ತಿರುಪತಿಯಲ್ಲಿ 1101 ವರ್ಷಗಳಷ್ಟು ಹಳೆಯ ಶಾಸನ ಪತ್ತೆ

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!