Monday, April 12, 2021

ಬೆಂಗಳೂರಲ್ಲೇ ಅತಿ ಹೆಚ್ಚು ಕೊರೋನಾ ಕೇಸ್; ಲಾಕ್ ಡೌನ್ ಪಾಲನೆಯಾಗದಿರುವುದೇ ಕಾರಣವಾ?

ಬೆಂಗಳೂರು: ರಾಜ್ಯದಲ್ಲೆ ಅತಿ ಹೆಚ್ಚು ಕೊರೋನಾ ಸೋಂಕಿತರನ್ನು ಬೆಂಗಳೂರು ನಗರ ಹೊಂದಿದ್ದು, ಸೋಂಕಿತರ ಸಂಖ್ಯೆ 189ಕ್ಕೆ ಏರಿಕೆಯಾಗಿದೆ.
ಇದಕ್ಕೆಲ್ಲ ಲಾಕ್ ಡೌನ್ ನಿರ್ಬಂಧ ಸಡಿಲಿಕೆ ಕಾರಣವಾಯ್ತಾ ಎಂಬ ಮಾತುಗಳು ವ್ಯಾಪಕವಾಗಿವೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಮರ್ಪಕವಾಗಿ ಪಾಲನೆಯಾಗುತ್ತಿದ್ದು, ಸರ್ಕಾರಿ ಆಡಳಿತದ ಮುಖ್ಯ ಕೇಂದ್ರವಾದ ಬೆಂಗಳೂರಿನಲ್ಲೇ ಮೊದಲಿನಿಂದಲೂ ಲಾಕ್ ಡೌನ್ ಸರಿಯಾಗಿ ಪಾಲನೆಯಾಗದಿರುವುದೇ ಕೊರೋನಾ ಪಾಸಿಟಿವ್ ಕೇಸ್ ಹೆಚ್ಚಲು ಕಾರಣ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಬೆಂಗಳೂರಿನಲ್ಲಿ 189 ಸೋಂಕಿತರ ಪೈಕಿ 100 ಮಂದಿ ಗುಣಮುಖರಾಗಿದ್ದಾರೆ. ಆಸ್ಪತ್ರೆಯಲ್ಲಿ 82 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. 6 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ದಕ್ಷಿಣ ವಲಯದಲ್ಲಿ ಅತಿ ಹೆಚ್ಚು ಅಂದರೆ 63 ಪ್ರಕರಣಗಳು ಕಂಡುಬಂದಿದ್ದು, ಇಲ್ಲಿಯೇ ಹೆಚ್ಚಿನ ಸಂಖ್ಯೆಯ ಕೊರೋನಾ ಕೇಸ್ ಗಳಿವೆ.
ಬೆಂಗಳೂರಿನ ಬೊಮ್ಮನಹಳ್ಳಿ (40), ಪಶ್ಚಿಮ ವಲಯ (33), ಬೆಂಗಳೂರು ಪೂರ್ವ ವಲಯ (27), ಮಹದೇವಪುರ ವಲಯ (13), ಯಲಹಂಕ (9), ಆನೇಕಲ್, ದಾಸರಹಳ್ಳಿ, ಆರ್ ಆರ್ ನಗರ, ಬೊಮ್ಮಸಂದ್ರದಲ್ಲಿ ತಲಾ 1 ಕೊರೋನಾ ಕೇಸ್‌ ಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಈವರೆಗೆ ಕೊರೋನಾ ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆಯಾಗಿದೆ. ಶನಿವಾರ 41 ಹೊಸ ಪ್ರಕರಣಗಳು ಪತ್ತೆಯಾಗಿವೆ. ಶನಿವಾರ ಬೆಂಗಳೂರಿನಲ್ಲಿ ಬರೋಬ್ಬರಿ 12 ಕೊರೋನಾ ಪಾಸಿಟಿವ್ ಕೇಸ್‌ಗಳು ಕಂಡುಬಂದಿವೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!