newsics.com
ಬೆಂಗಳೂರು :ರಾಜಧಾನಿ ಬೆಂಗಳೂರಿನಲ್ಲಿ ಕೇವಲ 15 ದಿನಗಳ ಅಂತರದಲ್ಲಿ 80 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಅಲರ್ಟ್ ಆಗಿದ್ದು ಎಲ್ಲಾ ವಾರ್ಡ್ಗಳಲ್ಲಿ ಮನೆ ಮನೆಗೆ ತೆರಳಿ ಸರ್ವೇ ಕಾರ್ಯ ನಡೆಸುತ್ತಿದ್ದಾರೆ.
80 ಡೆಂಘಿ ಪ್ರಕರಣಗಳಲ್ಲಿ 50 ಪ್ರಕರಣಗಳು ಪೂರ್ವ ಬೆಂಗಳೂರು ಹಾಗೂ ಮಹದೇವಪುರಗಳಲ್ಲಿಯೇ ಪತ್ತೆಯಾಗಿದೆ. ಬೆಂಗಳೂರು ಪೂರ್ವ ವಲಯದಲ್ಲಿ 24 ಹಾಗೂ ಮಹದೇವಪುರದಲ್ಲಿ 21 ಪ್ರಕರಣಗಳು ವರದಿಯಾಗಿವೆ.