newsics.com
ಕೋಲಾರ: ರಾಜ್ಯದ ಕೋಲಾರ ಜಿಲ್ಲೆಯ ಮುಳ ಬಾಗಿಲು ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಇಬ್ಬರು ಮಕ್ಕಳ ಪೈಕಿ ಒಂದು ಮಗು ಬೆಂಕಿ ಹತ್ತಿಕೊಂಡ ಪರಿಣಾಮ ಮೃತಪಟ್ಟಿದೆ. ತಾಯಿ ಮತ್ತು ಮತ್ತೊಂದು ಮಗು ಚೇತರಿಸಿಕೊಳ್ಳುತ್ತಿದೆ.
ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಇನ್ನೊಂದು ಘಟನೆಯಲ್ಲಿ ಬಾಗಲಕೋಟೆಯಲ್ಲಿ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಸಂಗಮೇಶ್ ಮತ್ತು ಕಿರಣ್ ನಾಯಕ್ ಎಂದು ಗುರುತಿಸಲಾಗಿದೆ.