newsics.com
ಬೆಂಗಳೂರು: ಎದೆನೋವಿನ ಹಿನ್ನೆಲೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಡಾ.ಉಮೇಶ್ ಜಾಧವ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಂಸದ ಜಾಧವ್ ಅವರಿಗೆ ಸೋಮವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಸದರೇ ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಲ ಪರೀಕ್ಷೆಗೆ ಒಳಗಾಗಿದ್ದು, ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಆವರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ಭಯಪಡುವಂತಹದ್ದೇನೂ ಆಗಿಲ್ಲ. ಶೀಘ್ರದಲ್ಲೇ ಗುಣಮುಖನಾಗುತ್ತೇನೆ ಎಂದು ತಿಳಿಸಿದ್ದಾರೆ.
ಈ ಮಧ್ಯೆ, ಕೊರೋನಾ ಸೋಂಕಿನಿಂದ ಬಳಲುತ್ತಿರುವ ಸಚಿವ ಮಾಧುಸ್ವಾಮಿ, ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ.ಪಾಟೀಲ್ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಾಮೀನು ಅರ್ಜಿ ವಜಾ; ರಾಗಿಣಿ, ಸಂಜನಾ ಸೇರಿ ಎಲ್ಲರಿಗೂ ಜೈಲೇ ಗತಿ
ಜ.1ರಿಂದ ಆನ್’ಲೈನ್’ನಲ್ಲೇ ಚೆಕ್ ಡೆಪಾಸಿಟ್ ಮಾಡಬಹುದು ಎಂದ RBI