Monday, October 3, 2022

ಆರ್. ಆರ್. ನಗರದಲ್ಲಿ ಗೆದ್ದ ಮುನಿರತ್ನ; ಅಧಿಕೃತ ಘೋಷಣೆಯಷ್ಟೆ ಬಾಕಿ

Follow Us

newsics.com
ಬೆಂಗಳೂರು:  ರಾಜ್ಯದ ರಾಜಕೀಯದಲ್ಲಿ ಜಿದ್ದಾಜಿದ್ದಿನ ಕದನಕ್ಕೆ ಸಾಕ್ಷಿಯಾಗಿದ್ದ ಆರ್ ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ  57672 ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆಯಷ್ಟೆ ಬಾಕಿಯಿದೆ.
ಮುನಿರತ್ನ ಅವರಿಗೆ ಒಂದು ಲಕ್ಷಕ್ಕೂ ಹೆಚ್ಚು ಮತಗಳು ದೊರೆತಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಗೆಲವು ಸಾಧಿಸಿದ್ದ ಮುನಿರತ್ನ ಬಳಿಕ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಮತ ಎಣಿಕೆ ಆರಂಭದಿಂದಲೂ ಅವರು ಮುನ್ನಡೆ ಕಾಯ್ದುಕೊಂಡಿದ್ದರು. ರಾಜರಾಜೇಶ್ವರಿನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ನಾಯ್ಡು ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಮುನಿರತ್ನ 103291 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ 58734 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಮುನಿರತ್ನ 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯಭೇರಿ ಭಾರಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!