newsics.com
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಚಿತ್ರದುರ್ಗದ ಸ್ಥಳೀಯ ನ್ಯಾಯಾಲಯದಲ್ಲಿ ಇಂದು ನಡೆಯಲಿದೆ. ಹಲವು ಬಾರಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿತ್ತು.
ಇದೀಗ ಶ್ರೀಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನ್ಯಾಯಾಂಗ ಬಂಧನದಲ್ಲಿರುವ ಶ್ರೀಗಳಿಗೆ ಚಿಕಿತ್ಸೆ ನೀಡಲು ನ್ಯಾಯಾಲಯ ಅನುಮತಿ ನೀಡಿತ್ತು.
ಇಂದು ಜಾಮೀನು ದೊರೆಯದಿದ್ದರೆ ಶ್ರೀಗಳ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗುವ ಸಾಧ್ಯತೆ ಇದೆ. ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಶ್ರೀಗಳನ್ನು ಬಂಧಿಸಲಾಗಿದೆ