newsics.com
ಶಿವಮೊಗ್ಗ; ಲೈಂಗಿಕ ದೌರ್ಜನ್ಯದ ಆರೋಪದಡಿ ಫೋಕ್ಸೋ ಪ್ರಕರಣದಲ್ಲಿ ಬಂಧಿತರಾದ ಮುರುಘಾಮಠದ ಶ್ರೀಗಳಿಗೆ ಆ್ಯಂಜಿಯೋಗ್ರಾಂ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಇಂದು ಡಿಸ್ಚಾರ್ಜ್ ಮಾಡಲಾಗಿದೆ.
ಎದೆ ನೋವಿನಿಂದ ಬಳಲುತ್ತಿದ್ದ ಮುರುಘಾಶ್ರೀ ಎರಡು ದಿನಗಳ ಹಿಂದೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಡಿಸ್ಚಾರ್ಜ್ ಆದ ಬಳಿಕ ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಗಿದ್ದು, ಅಲ್ಲಿಂದ ಚಿತ್ರದುರ್ಗದ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಗುತ್ತದೆ ಎಂದು ತಿಳಿದುಬಂದಿದೆ.